ಮಂಗಳೂರು: ರಾಜ್ಯದಲ್ಲಿ ಕೃಷಿಯೇತರ ಭೂಮಿಯ ನೋಂದಣಿಗೆ ಇ-ಸ್ವತ್ತು ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶದಿಂದ ಆಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರ, ಸಮಸ್ಯಾತ್ಮಕ ಜಿಲ್ಲೆಗಳಿಗೆ ಈ ವ್ಯವಸ್ಥೆಯಿಂದ ವಿನಾಯಿತಿ ನೀಡುವ ಬಗ್ಗೆ ಚಿಂತನೆ ನಡೆಸಿದೆ ಎಂದು ಗ್ರಾಮೀಣ ಅಭಿವದ್ಧ್ದಿ ಮತ್ತು ಪಂಚಾಯತ್ ರಾಜ್ ಸಚಿವ ಹೆಚ್.ಕೆ ಪಾಟೀಲ್ರವರ ಹೇಳಿಕೆ ಹಾಸ್ಯಾಸ್ಪದವಾಗಿದೆ. ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಹತ್ತಿರ ಬಂದಾಗ ಸಾರ್ವಜನಿಕರನ್ನು ವಂಚಿಸುವ ಹುನ್ನಾರವಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಹಾಗೂ ಮಾಜಿ ಶಾಸಕರಾದ ಮೋನಪ್ಪ ಭಂಡಾರಿಯವರು ಪತ್ರದ ಮೂಲಕ ತಿಳಿಸಿದರು.
ಕಳೆದ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಇ-ಸ್ವತ್ತು (9 ಮತ್ತು 11) ಕಡ್ಡಾಯಗೊಳಿಸಿದ ಬಗ್ಗೆ ರಾಜ್ಯವ್ಯಾಪಿ ಚರ್ಚೆ ನಡೆದಿದ್ದು, ರಾಜ್ಯ ಸರಕಾರದ ದ.ಕ ಜಿಲ್ಲೆಯ ಮಂತ್ರಿಗಳು ಹಾಗೂ ಶಾಸಕರುಗಳು ನೀಡಿದ ಹೇಳಿಕೆಗಳ ಸತ್ಯಾಸತ್ಯತೆಯನ್ನು ಸಾರ್ವಜನಿಕರಿಗೆ ಹೇಳಿಕೆ ನೀಡಿದಾಗ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜರವರು ಸದ್ರಿ ಇ-ಸ್ವತ್ತು ಕಡ್ಡಾಯಗೊಳಿಸಿದ್ದ ಆದೇಶವನ್ನು ತೆಗೆದು ಹಾಕಲಾಗಿದೆ. ಅದರಿಂದ ಜನರಿಗೆ ಯಾವುದೇ ಸಮಸ್ಯೆ ಇಲ್ಲ. ಜನರು ತಮ್ಮ ತಮ್ಮ ಆಸ್ತಿಗಳನ್ನು ಯಾವುದೇ ಅಡಚಣೆ ಇಲ್ಲದೆ ನೋಂದಾಯಿಸಿಕೊಳ್ಳಬಹುದು ಎಂದು ಹೇಳಲಾಗಿದ್ದು ಕೆಲವೊಂದು ಆದೇಶ ಪತ್ರಗಳನ್ನು ಕಳುಹಿಸಿಕೊಡಲಾಗಿದೆ. ಅದಕ್ಕೆ ಉತ್ತರವನ್ನು ತಕ್ಷಣ ನೀಡಬೇಕು ಎಂಬಿತ್ಯಾದಿಯಾಗಿ ಹೇಳಿಕೆ ನೀಡಿದ್ದು, ಈಗ ಸರಕಾರದ ೨೦೧೩ರ ಆಗಸ್ಟ್ನ ಆದೇಶದಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು ಜಿಲ್ಲೆಗಳಲ್ಲಿ ಆಸ್ತಿ ನೋಂದಾವಣಿ ಸ್ಥಗಿತಗೊಂಡಿದೆ ಎಂಬ ಹೇಳಿಕೆ ಅರ್ಥಹೀನವಾಗಿದೆ ಎಂದು ಅವರು ಹೇಳಿದರು.
ಈಗ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯು ಸಮೀಪಿಸುತ್ತಿದ್ದು, ಓಟಿಗಾಗಿ ಇ-ಸ್ವತ್ತಿನ ಆದೇಶ ಪ್ರಸ್ತುತ ಜಾರಿಯಲ್ಲಿದ್ದರೂ ಸಾರ್ವಜನಿಕರಿಗೆ ತಪ್ಪು ಮಾಹಿತಿಯನ್ನು ನೀಡಿ, ಸರಿಪಡಿಸುವ ನಿರ್ಧಾರ ಎಂದು ಹೇಳಿಕೆ ನೀಡಿ ಹಾದಿ ತಪ್ಪಿಸುವಂತೆ ಮಾಡಿದೆ. ಜನರಿಗೆ ವಂಚನೆ ಮಾಡುವಂತ ಹುನ್ನಾರವನ್ನು ಸರಕಾರವು ಮಾಡುತ್ತಿರುವುದು ನಾಚಿಕೆಗೇಡು ಎಂದು ಹೇಳಿದರು. ಇನ್ನಾದರೂ ಸರಕಾರ ಸಾರ್ವಜನಿಕರಿಗೆ ಈ ರೀತಿ ಮಾಡುವ ವಂಚನೆಯನ್ನು ನಿಲ್ಲಿಸಿ, ತಕ್ಷಣ 9 ಮತ್ತು 11 ಇ-ಸ್ವತ್ತು ಆದೇಶವನ್ನು ಹಿಂಪಡೆಯಬೇಕು ಭಂಡಾರಿ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.