
ನವದೆಹಲಿ: ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿದ ಐದು ದಶಕಗಳ ನಂತರ, NCERT ಮೊದಲ ಬಾರಿಗೆ 9 ನೇ ತರಗತಿಯ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಕರಾಳ ಅಧ್ಯಾಯದ ವಿಷಯವನ್ನು ಪರಿಚಯಿಸಿದೆ.
ಹೊಸದಾಗಿ ಅಭಿವೃದ್ಧಿಪಡಿಸಲಾದ ಸಮಾಜ ವಿಜ್ಞಾನ ಪಠ್ಯಪುಸ್ತಕ “ಅಂಡರ್ಸ್ಟ್ಯಾಂಡಿಂಗ್ ಸೊಸೈಟಿ: ಇಂಡಿಯಾ ಆಂಡ್ ಬಿಯಾಂಡ್” ನಲ್ಲಿ ತುರ್ತುಪರಿಸ್ಥಿತಿ ಉಲ್ಲೇಖ ಕಂಡುಬರುತ್ತದೆ, ತುರ್ತು ಪರಿಸ್ಥಿತಿಯನ್ನು ಭಾರತೀಯ ಪ್ರಜಾಪ್ರಭುತ್ವದ ಸಾಮರ್ಥ್ಯ ಮತ್ತು ಸವಾಲುಗಳ ಅಧ್ಯಾಯದಲ್ಲಿ ಸೇರಿಸಲಾಗಿದೆ.
9 ನೇ ತರಗತಿಯ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ವಿಭಾಗವನ್ನು ಸೇರಿಸಲಾಗಿರುವುದು ಇದೇ ಮೊದಲು ಎಂದು NCERT ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.
1975 ರಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದ 50 ವರ್ಷಗಳನ್ನು ದೇಶವು ಆಚರಿಸುತ್ತಿರುವುದರಿಂದ ಶಾಲಾ ಪಠ್ಯಕ್ರಮದಲ್ಲಿ ಇದು ಗಮನಾರ್ಹ ಸೇರ್ಪಡೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



