
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಒಂದು ವರ್ಷವನ್ನು ಪೂರ್ಣಗೊಳಿಸಿದ್ದು, ಇಲ್ಲಿಯವರೆಗೆ ಸುಮಾರು ಆರು ಕೋಟಿ ಮತದಾರರನ್ನು ಅಳಿಸಿ ಹಾಕಲಾಗಿದೆ.
ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಈ ಪ್ರಕ್ರಿಯೆ ಹತ್ತೊಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಂದುವರೆದಿದೆ. ಸುಪ್ರೀಂಕೋರ್ಟ್ ಇದರ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದೆ.
ವಿಧಾನಸಭಾ ಚುನಾವಣೆಗೆ ಮುನ್ನ ಕಳೆದ ವರ್ಷ ಜೂನ್ 24 ರಂದು ಬಿಹಾರದಲ್ಲಿ ಪ್ರಾಯೋಗಿಕ SIR ವ್ಯಾಯಾಮ ಪ್ರಾರಂಭವಾಯಿತು. ಬಳಿಕ ಇದು ಇತರ ರಾಜ್ಯಗಳಿಗೆ ವಿಸ್ತರಣೆಗೊಂಡಿತು. ವಿರೋಧಪಕ್ಷಗಳ ತೀವ್ರ ವಿರೋಧವೂ ಇದಕ್ಕೆ ವ್ಯಕ್ತವಾಗಿತ್ತು.
ಮಾರ್ಚ್ನಲ್ಲಿ, SIR ಅನ್ನು ಕೈಗೊಳ್ಳುವ ಚುನಾವಣಾ ಆಯೋಗದ ಕ್ರಮದ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಸರ್ವಾನುಮತದಿಂದ ಎತ್ತಿಹಿಡಿದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



