
ನವದೆಹಲಿ: ಪರಿಶಿಷ್ಟ ಜಾತಿ ಅಥವಾ ಹಿಂದುಳಿದ ವರ್ಗದ ಹಿಂದೂ ಇಸ್ಲಾಂಗೆ ಮತಾಂತರಗೊಂಡ ನಂತರ, ತಾನು ಹಿಂದುಳಿದ ವರ್ಗ (BC)ದ ಮುಸ್ಲಿಂ ಎಂದು ಹೇಳಿಕೊಳ್ಳುವಂತಿಲ್ಲ ಮತ್ತು ಮೀಸಲಾತಿ ಸೌಲಭ್ಯಗಳನ್ನು ಪಡೆಯುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ.
ಜೂನ್ 24 ರಂದು ನೀಡಿದ ತೀರ್ಪು, ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು, ಅಧಿಸೂಚಿತ ಸಮುದಾಯಗಳು ಅಥವಾ ಪರಿಶಿಷ್ಟ ಜಾತಿಗಳಿಂದ ಇಸ್ಲಾಂಗೆ ಮತಾಂತರಗೊಂಡವರನ್ನು ಮೀಸಲಾತಿ ಪಡೆಯಲು ಪರಿಗಣಿಸಬಹುದು ಎಂದು ಹೇಳುವ 2024 ರ ತಮಿಳುನಾಡು ಸರ್ಕಾರದ ಆದೇಶವನ್ನು (GO) ರದ್ದುಗೊಳಿಸಿದೆ.
ಈ ಹಿಂದೆ ಪರಮಶಿವಂ ಆಗಿದ್ದ ತೂತುಕುಡಿ ಜಿಲ್ಲೆಯ ಸಮೀರ್ ಅಹಮದ್ ಎನ್. ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಮತ್ತು ನ್ಯಾಯಮೂರ್ತಿ ಪಿ.ಬಿ. ಬಾಲಾಜಿ ಅವರ ವಿಭಾಗೀಯ ಪೀಠವು ಈ ತೀರ್ಪು ನೀಡಿದೆ.
“ಇಸ್ಲಾಂಗೆ ಮತಾಂತರಗೊಂಡವರು ಹಿಂದುಳಿದ ವರ್ಗದ ಮುಸ್ಲಿಂ ಸ್ಥಾನಮಾನವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾವು ಭಾವಿಸುತ್ತೇವೆ. ಅವರು ಕೇವಲ ಮುಸ್ಲಿಂ ಅಷ್ಟೆ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



