News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜಮ್ಮು-ಕಾಶ್ಮೀರದಲ್ಲಿ ಸಿಲುಕಿದ್ದ ಲಷ್ಕರ್ ಉಗ್ರ ಎನ್ಕೌಂಟರ್‌ನಲ್ಲಿ ಹತ್ಯೆ

ನವದೆಹಲಿ: ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು ದೊರೆತಿದ್ದು, ಐದು ದಿನಗಳ ಕಾಲ ಜಮ್ಮು-ಕಾಶ್ಮೀರದಲ್ಲಿ ಸಿಲುಕಿಕೊಂಡಿದ್ದ ಶಂಕಿತ ಲಷ್ಕರ್-ಎ-ತೈಬಾ ಭಯೋತ್ಪಾದಕನನ್ನು ಎನ್ಕೌಂಟರ್‌ನಲ್ಲಿ ಕೊಲ್ಲಲಾಗಿದೆ.

ದಕ್ಷಿಣ ಕಾಶ್ಮೀರದ ಸೈದ್ಪೋರಾ ಪ್ರದೇಶದಲ್ಲಿ ಅವನ ಶವ ಪತ್ತೆಯಾಗಿದೆ. ಭಯೋತ್ಪಾದಕನನ್ನು ಹೊಡೆದುರುಳಿಸಿದ ನಂತರ ಪಡೆಗಳು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಂಡಿವೆ.

ಐದು ದಿನಗಳ ಹಿಂದೆ ಈ ಪ್ರದೇಶದ ದಟ್ಟವಾದ ತೋಟದಲ್ಲಿ ಕಣ್ಗಾವಲು ಕ್ಯಾಮೆರಾಗಳಿಗೆ ಇಬ್ಬರು ಭಯೋತ್ಪಾದಕರು ಪತ್ತೆಯಾಗಿದ್ದರು. ನಂತರ ಕಾರ್ಯಾಚರಣೆ ನಡೆಸಲಾಗಿತ್ತು.

ಉಗ್ರರನ್ನು ಲಷ್ಕರ್ ಕಮಾಂಡರ್ ಜಾಕಿರ್ ಗನೈ ಮತ್ತು ಅವನ ಸಹಚರ ಲತೀಫ್ ಭಟ್ ಎಂದು ಗುರುತಿಸಲಾಗಿದ್ದಿ, ಇವರ ಇರುವಿಕೆಯ ಬಗ್ಗೆ ಮಾಹಿತಿಯ ನಂತರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಸೈದ್ಪೋರಾದ ಛಾನಾಪೋರಾ ಪ್ರದೇಶದಲ್ಲಿ ಚಲಿಸುತ್ತಿರುವಾಗ ಇಬ್ಬರೂ ಸಿಸಿಟಿವಿಯಲ್ಲಿ ಸೆರೆಹಿಡಿಯಲ್ಪಟ್ಟರು. ಆ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಪ್ರದೇಶವನ್ನು ಸುತ್ತುವರಿದ ತಕ್ಷಣ ಎನ್‌ಕೌಂಟರ್‌ ನಡೆದಿದೆ. ಕೊಲ್ಲಲ್ಪಟ್ಟ ಭಯೋತ್ಪಾದಕನ ಗುರುತನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಪಡೆಗಳು ಪ್ರಯತ್ನಿಸುತ್ತಿವೆ.

ಯಶಸ್ಸನ್ನು ದೃಢೀಕರಿಸಿದ ಜಮ್ಮು-ಕಾಶ್ಮೀರ ಪೊಲೀಸರು ಪೋಸ್ಟ್ ಮಾಡಿ, “ನೀವು ಓಡಬಹುದು, ಆದರೆ ನೀವು ಅಡಗಿಕೊಳ್ಳಲು ಸಾಧ್ಯವಿಲ್ಲ”. ಭಯೋತ್ಪಾದಕನನ್ನು ಬೇಟೆಯಾಡುವ ಕಾರ್ಯಾಚರಣೆಯನ್ನು  ಜಮ್ಮು-ಕಾಶ್ಮೀರ ಪೊಲೀಸರು, ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ನಡೆಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top