
ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನ ಹೊರತಾಗಿಯೂ ಭಾರತವು ಶೇ. 7.7 ರ ಬೆಳವಣಿಗೆ ದರವನ್ನು ಕಾಯ್ದುಕೊಳ್ಳುವುದು ಭಾರತದ “ಅಂತರ್ಗತ ಶಕ್ತಿಯನ್ನು” ಪ್ರತಿಬಿಂಬಿಸುತ್ತದೆ ಮತ್ತು ಭಾರತವು ಹೊಸ ಮೈಲಿಗಲ್ಲುಗಳನ್ನು ಸಾಧಿಸಲು ಬಯಸುವ “ಉತ್ಸಾಹವನ್ನು ಪ್ರತಿಬಿಂಬಿಸುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಮಧ್ಯಪ್ರಾಚ್ಯದಲ್ಲಿನ ಯುದ್ಧವು ಇಂಧನ ಅಗತ್ಯತೆಗಳು, ಪೆಟ್ರೋಲ್, ಡೀಸೆಲ್, ಎಲ್‌ಪಿಜಿ, ರಸಗೊಬ್ಬರಗಳು ಮತ್ತು ರಾಸಾಯನಿಕಗಳಿಗಾಗಿ ಇತರರನ್ನು ಅವಲಂಬಿಸಿರುವ ಭಾರತದಂತಹ ರಾಷ್ಟ್ರಗಳಿಗೆ ಪ್ರಮುಖ ಬಿಕ್ಕಟ್ಟನ್ನು ಒಡ್ಡಿದೆ. ಇದರ ಹೊರತಾಗಿಯೂ, ಭಾರತವು ಶೇ. 7.7 ರ ಬೆಳವಣಿಗೆ ದರವನ್ನು ಕಾಯ್ದುಕೊಂಡಿದೆ, ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಹೊರಹೊಮ್ಮುತ್ತಿದೆ” ಎಂದರು.
ಮಳೆ ಅಥವಾ ಮಳೆಗಾಲದ ಅಧಿವೇಶನ ಎರಡೂ ಸಕಾಲಿಕವಾಗಿ ನಡೆದರೆ ಉತ್ಪಾದಕತೆ ಹೆಚ್ಚುತ್ತದೆ.ಮತ್ತು ಎರಡೂ ಉತ್ಪಾದಕವಾಗಿದ್ದರೆ, ಅದು ದೇಶ ಮತ್ತು ಸಕಲ ಜೀವಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಹೀಗಾಗಿ, ಮಳೆಮತ್ತು ಮಳೆಗಾಲದ ಅಧಿವೇಶನ ಎರಡೂ ಸಹ ಸಕಾಲಿಕವಾಗಿ ನಡೆದು ಉತ್ಪಾದಕವಾಗಿರಲಿ ಎಂದು ನಾನು ಪ್ರಾರ್ಥಿಸುತ್ತೇವೆ ಎಂದರು.
ಕಳೆದ ಒಂದು ತಿಂಗಳಲ್ಲಿ, ದೇಶವು ಅನೇಕ ಸಾಧನೆಗಳನ್ನು ಮಾಡಿದೆ. ದೇಶದ ಜನರ ಹೃದಯ ಹೆಮ್ಮೆಯಿಂದ ತುಂಬುವಂತಹ ಸಾಧನೆಗಳ ಸರಣಿ ಮುಂದುವರೆಯುತ್ತಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ ಮತ್ತು ಈಗ ಬಾಹ್ಯಾಕಾಶದ ಸಾಧನೆಗಳು ಭಾರತಕ್ಕೆ ಹೆಮ್ಮೆಯ ಕ್ಷಣಗಳಾಗಿವೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



