News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜಾರ್ಖಾಂಡ್‌ ನೇಮಕಾತಿ ಪರೀಕ್ಷಾ ಅಕ್ರಮ: ಕಾಂಗ್ರೆಸ್‌ ಮೌನ ಪ್ರಶ್ನಿಸಿದ ಇರಾನಿ

ನವದೆಹಲಿ: ಜಾರ್ಖಂಡ್‌ನ ನೇಮಕಾತಿ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳ ಕುರಿತು ಬಿಜೆಪಿ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಕಾಂಗ್ರೆಸ್-ಜೆಎಂಎಂ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನೇಮಕಾತಿ ಪರೀಕ್ಷೆಯಲ್ಲಿ ಸಾವಿರಾರು ಅಭ್ಯರ್ಥಿಗಳನ್ನು ಅನುತ್ತೀರ್ಣಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಅದೇ ಸಮಯದಲ್ಲಿ ಅವರು “ಪರೀಕ್ಷೆಗೆ ಸಂಬಂಧಿಸಿದ ವಿವಾದಗಳ ಬಗ್ಗೆ ಸೆಲೆಕ್ಟಿವ್ ಆಕ್ರೋಶ” ಗಳನ್ನು ಪ್ರಶ್ನಿಸಿದ್ದಾರೆ.

ಸಂದರ್ಶನದಲ್ಲಿ ಮಾತನಾಡಿದ ಇರಾನಿ, ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗಳಿಗೆ ನೀಡಲಾದ ವ್ಯಾಪಕ ಪ್ರಚಾರ ರಾಂಚಿಯಲ್ಲಿ ಜೆಪಿಎಸ್‌ಸಿ ಆಕಾಂಕ್ಷಿಗಳು ನಡೆಸುತ್ತಿರುವ ಆಂದೋಲನಕ್ಕೆ ಯಾಕೆ ನೀಡಲಾಗುತ್ತಿಲ್ಲ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

14ನೇ ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗದ (ಜೆಪಿಎಸ್‌ಸಿ) ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ರದ್ದುಗೊಳಿಸುವುದು, ಸಿಬಿಐ ತನಿಖೆ ಮತ್ತು ರಾಜ್ಯದ ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆಗಳನ್ನು ಒತ್ತಾಯಿಸಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವಂತೆ ಅವರ ಹೇಳಿಕೆಗಳು ಬಂದಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top