News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 12th September 2026

×
Home About Us Advertise With s Contact Us

ಮೋದಿ ಜೊತೆ ಇರಾನ್‌ ಅಧ್ಯಕ್ಷರ ಮಾತುಕತೆ: ಹೆಚ್ಚಿನ ಸಹಕಾರದ ಆಶಯ

ನವದೆಹಲಿ: ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೆಹಲಿಯಲ್ಲಿ ಮಾತುಕತೆ ನಡೆಸಿದ್ದಾರೆ. ಈ ಮಾತುಕತೆಗಳು ಉಭಯ ದೇಶಗಳ ನಡುವೆ ಹೆಚ್ಚಿನ ಸಹಕಾರಕ್ಕೆ ದಾರಿ ಮಾಡಿಕೊಡಲಿವೆ ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಸಂಜೆ ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತದ ಧಾರ್ಮಿಕ ಮುಖಂಡರು, ಚಿಂತಕರು ಮತ್ತು ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದ ಇರಾನ್ ಅಧ್ಯಕ್ಷ ಮಸೂದ್, ಸಂಸ್ಕೃತಿ, ತಂತ್ರಜ್ಞಾನ, ವ್ಯಾಪಾರ, ವಿಜ್ಞಾನ ಮತ್ತು ಆರ್ಥಿಕತೆಯ ಕ್ಷೇತ್ರಗಳಲ್ಲಿನ ಸಹಕಾರದ ಕುರಿತು ಪ್ರಸ್ತಾಪಿಸಿದರು.

“ಮೊದಲನೆಯದಾಗಿ, ಭಾರತ ಸರ್ಕಾರ ಮತ್ತು ಪ್ರಧಾನಿಯವರ ಅತ್ಯುತ್ತಮ ಆತಿಥ್ಯವನ್ನು ನಾನು ಶ್ಲಾಘಿಸುತ್ತೇನೆ. ನಮ್ಮ ನಡುವೆ ಅತ್ಯುತ್ತಮ ಮಾತುಕತೆಗಳು ನಡೆದಿವೆ. ಈ ಮಾತುಕತೆಗಳು ಮತ್ತು ಸಂಬಂಧಗಳು ಸಂಸ್ಕೃತಿ, ತಂತ್ರಜ್ಞಾನ, ವ್ಯಾಪಾರ, ವಿಜ್ಞಾನ, ಆರ್ಥಿಕತೆ ಮತ್ತು ಇತರ ಕ್ಷೇತ್ರಗಳಲ್ಲಿ ಹೆಚ್ಚಿನ ಸಹಕಾರಕ್ಕೆ ದಾರಿ ಮಾಡಿಕೊಡುತ್ತವೆ ಎಂದು ನಾನು ಭಾವಿಸುತ್ತೇನೆ. ನಾವೆಲ್ಲರೂ ಒಗ್ಗೂಡಿ ಅವುಗಳಿಗೆ ಮರುಜೀವ ನೀಡಬಹುದು” ಎಂದರು.

ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಇರಾನ್ ಅಧ್ಯಕ್ಷರು, ಈ ವರ್ಷದ ಫೆಬ್ರವರಿಯಲ್ಲಿ ಪ್ರಾರಂಭವಾದ ಯುದ್ಧಕ್ಕೆ ಸಂಬಂಧಿಸಿದಂತೆ ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು ಹಾಗೂ ಇರಾನ್ ಮೇಲೆ ದಬ್ಬಾಳಿಕೆ ನಡೆಸಲು ಈ ದೇಶಗಳು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು. ಇರಾನ್ ಎಂದಿಗೂ ಶರಣಾಗುವುದಿಲ್ಲ ಮತ್ತು ದೃಢವಾಗಿ ಪ್ರತಿರೋಧ ಒಡ್ಡುತ್ತದೆ ಎಂದು ಪುನರುಚ್ಛರಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top