
ನವದೆಹಲಿ: ಬುಧವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರದ ಅರಣ್ಯ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಶ್-ಎ-ಮೊಹಮ್ಮದ್ (JeM) ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ. ಈ ಪ್ರದೇಶದಲ್ಲಿ ಉಗ್ರರ ಚಲನವಲನದ ಕುರಿತು ಗುಪ್ತಚಾರ ಮಾಹಿತಿ ಲಭ್ಯವಾದ ನಂತರ, ಉಧಮ್‌ಪುರದ ಮಜಲ್ಟಾ ವ್ಯಾಪ್ತಿಯ ಬ್ರಾಟ್ಟಲ್ ಸೋಹನ್ ಮತ್ತು ಖುಬ್ಬನ್ ಅರಣ್ಯ ಪ್ರದೇಶಗಳಲ್ಲಿ ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಯಿತು ಮತ್ತು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಯಿತು.
ಪಡೆಗಳು ಕೆಲವು ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದಾಗ ಗುಂಡಿನ ವಿನಿಮಯ ನಡೆಯಿತು ಮತ್ತು ಅದರಲ್ಲಿ ಇಬ್ಬರು ಉಗ್ರರು ಹತರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಸೆಪ್ಟೆಂಬರ್ 16 ಮತ್ತು 17 ರ ಮಧ್ಯರಾತ್ರಿ ನಡೆಸಿದ ಜಂಟಿ ಗುಪ್ತಚರ-ಆಧಾರಿತ ಕಾರ್ಯಾಚರಣೆಯಲ್ಲಿ, ಉಧಮ್‌ಪುರದ ಬ್ರಾಟ್ಟಲ್ ಪ್ರದೇಶದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ಲಭ್ಯವಿತ್ತು,” ಎಂದು ಭಾರತೀಯ ಸೇನೆಯ ಜಮ್ಮು-ಮೂಲದ ‘ವೈಟ್ ನೈಟ್ ಕಾರ್ಪ್ಸ್’ ಹೇಳಿಕೆಯಲ್ಲಿ ತಿಳಿಸಿದೆ.
“ಪ್ರತಿಕೂಲ ಹವಾಮಾನ, ಕಠಿಣ ಭೂಪ್ರದೇಶ ಮತ್ತು ಕಡಿಮೆ ಗೋಚರತೆಯ ಹೊರತಾಗಿಯೂ, ವೈಟ್ ನೈಟ್ ಕಾರ್ಪ್ಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಸಿಆರ್‌ಪಿಎಫ್ (CRPF) ಪಡೆಗಳು ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯನ್ನು ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದವು” ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



