
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿದ ಜಂಟಿ ಪತ್ರಿಕಾ ಪ್ರಕಟಣೆಯ ಪ್ರಕಾರ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರ ಭೂತಾನ್ ಭೇಟಿಯ ಸಂದರ್ಭದಲ್ಲಿ, ಅಲ್ಲಿನ ಇಂಧನ ಯೋಜನೆಗಳಿಗಾಗಿ 4,000 ಕೋಟಿ ರೂಪಾಯಿಗಳ ರಿಯಾಯಿತಿ ದರದ ಸಾಲ ಸೌಲಭ್ಯಕ್ಕೆ (Line of Credit) ಸಂಬಂಧಿಸಿದ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಇದನ್ನು ಭಾರತ ಮತ್ತು ಭೂತಾನ್ ಸ್ವಾಗತಿಸಿವೆ.
ಶುಕ್ರವಾರ ಬಿಡುಗಡೆಯಾದ ಅಧಿಕೃತ ಪತ್ರಿಕಾ ಪ್ರಕಟಣೆಯ ಪ್ರಕಾರ, ಭೂತಾನ್‌ನ ವಿದೇಶಾಂಗ ವ್ಯವಹಾರಗಳು ಮತ್ತು ಬಾಹ್ಯ ವ್ಯಾಪಾರ ಸಚಿವ ಡಿ.ಎನ್. ಧುಂಗ್ಯೆಲ್ ಅವರ ಆಹ್ವಾನದ ಮೇರೆಗೆ ಜೈಶಂಕರ್ ಅವರು ಸೆಪ್ಟೆಂಬರ್ 16 ರಿಂದ 18 ರವರೆಗೆ ಭೂತಾನ್‌ಗೆ ಅಧಿಕೃತ ಭೇಟಿ ನೀಡಿದ್ದರು.
ಈ ಭೇಟಿಯ ಸಂದರ್ಭದಲ್ಲಿ, ಉಭಯ ಸಚಿವರು ದ್ವಿಪಕ್ಷೀಯ ಸಹಕಾರದ ಎಲ್ಲಾ ಅಂಶಗಳು ಹಾಗೂ ಪರಸ್ಪರ ಮಹತ್ವದ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳನ್ನು ಪರಿಶೀಲಿಸಿದರು ಮತ್ತು ಭಾರತ-ಭೂತಾನ್ ಇಂಧನ ಪಾಲುದಾರಿಕೆಯಲ್ಲಿನ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



