News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೋದಿಯನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ: ಸರ್ಬಿಯಾದ ಮಾಜಿ ಅಧ್ಯಕ್ಷ

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಉನ್ನತ ಮಟ್ಟಕ್ಕೇರಿಸಿ ಜಾಗತಿಕ ವೇದಿಕೆಯಲ್ಲಿ ಪ್ರಬಲ ಶಕ್ತಿಯನ್ನಾಗಿ ಪರಿವರ್ತಿಸಿದ್ದರೂ ಅವರನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಸರ್ಬಿಯಾದ ಮಾಜಿ ಅಧ್ಯಕ್ಷ ಅಲೆಕ್ಸಾಂಡರ್ ವುಸಿಕ್ ಅವರು ಪ್ರತಿಪಾದಿಸಿದ್ದಾರೆ.

ಪ್ರಧಾನಿ ಮೋದಿ ಅವರು ಸರ್ಕಾರಿ ಮುಖ್ಯಸ್ಥರಾಗಿ 25 ವರ್ಷಗಳ ಸೇವೆಯನ್ನು ಪೂರೈಸುತ್ತಿರುವ ಸಂದರ್ಭದಲ್ಲಿಯೇ, ಪಾಡ್‌ಕ್ಯಾಸ್ಟ್ ಒಂದರಲ್ಲಿ ವುಸಿಕ್ ನೀಡಿದ ಹೇಳಿಕೆಯ ತುಣುಕೊಂದು ವೈರಲ್ ಆಗಿದೆ.

ಸಂಸತ್ತಿನ ಚುನಾವಣೆಯಲ್ಲಿ ಸ್ಪರ್ಧಿಸಲು ಕಳೆದ ತಿಂಗಳು ಸರ್ಬಿಯಾದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ವುಸಿಕ್, ನಾಯಕರನ್ನು ದುರ್ಬಲಗೊಳಿಸುವ ಜಾಗತಿಕ ಪ್ರವೃತ್ತಿಯತ್ತ ಗಮನ ಸೆಳೆದರು. ಪ್ರಧಾನಿ ಮೋದಿಯವರನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದ ವುಸಿಕ್, ಅವರು ಭಾರತವನ್ನು ಪ್ರಮುಖ ಜಾಗತಿಕ ಶಕ್ತಿಯನ್ನಾಗಿ ರೂಪಿಸಿದ್ದಾರೆ ಮತ್ತು “ಅಪಾರ ಸಾಧನೆಗಳನ್ನು” ಮಾಡಿದ್ದಾರೆ ಎಂದು ಹೇಳಿದ್ದಾರೆ.

“ನಿಮ್ಮಲ್ಲಿ ನರೇಂದ್ರ ಮೋದಿಯಂತಹ ನಾಯಕರಿದ್ದಾರೆ. ಆದರೆ ಈಗ ಅವರನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ. ಪ್ರಧಾನಿ ಮೋದಿ ಭಾರತವನ್ನು ಉನ್ನತ ಮಟ್ಟಕ್ಕೇರಿಸಿದ್ದಾರೆ. ಅವರು ಮಹಾತ್ಮ ಗಾಂಧಿಯವರ ಬೋಧನೆಗಳನ್ನು ಪಾಲಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ವುಸಿಕ್ ಹೇಳಿದ್ದಾರೆ.

“ಅವರಿಂದಲೇ ಭಾರತವು ವಿಶ್ವ ವೇದಿಕೆಯಲ್ಲಿ ಅತ್ಯಂತ ಮಹತ್ವದ ಸ್ಥಾನವನ್ನು ಪಡೆಯಿತು ಮತ್ತು ಪ್ರಬಲ ಶಕ್ತಿಯಾಗಿ ಹೊರಹೊಮ್ಮಿತು. ಅವರು ಅದ್ಭುತ ಕೆಲಸಗಳನ್ನು ಮಾಡಿದ್ದಾರೆ, ಆದರೂ ಅವರು ವಿಫಲರಾಗಿದ್ದಾರೆ ಅಥವಾ ಇನ್ನೇನೋ ಎಂದು ಹೇಳುವ ಮೂಲಕ ಅವರನ್ನು ಕೆಳಗಿಳಿಸಲು ಪ್ರಯತ್ನಿಸಲಾಗುತ್ತಿದೆ. ಇದೊಂದು ರೀತಿಯ ಮಾದರಿಯಾಗಿ (pattern) ಪರಿಣಮಿಸಿದೆ,” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top