
ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ – ನಗರ 2.0 (PMAY-U 2.0) ಅಡಿಯಲ್ಲಿ ಹೆಚ್ಚುವರಿಯಾಗಿ 1 ಲಕ್ಷದ 93 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಅನುಮೋದನೆಯೊಂದಿಗೆ, ಈ ಯೋಜನೆಯಡಿ ಮಂಜೂರಾದ ಒಟ್ಟು ಮನೆಗಳ ಸಂಖ್ಯೆ ಈಗ 20 ಲಕ್ಷಗಳನ್ನು ಮೀರಿದೆ. ನವದೆಹಲಿಯಲ್ಲಿ ನಡೆದ ‘ಕೇಂದ್ರೀಯ ಮಂಜೂರಾತಿ ಮತ್ತು ಮೇಲ್ವಿಚಾರಣಾ ಸಮಿತಿ’ಯ (Central Sanctioning and Monitoring Committee) 10ನೇ ಸಭೆಯ ನಂತರ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನಿನ್ನೆ ಈ ಘೋಷಣೆಯನ್ನು ಮಾಡಿದೆ. ನಗರ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಸತ್ಯೇಂದ್ರ ಸಿಂಗ್ ಅವರು ಈ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಆಂಧ್ರಪ್ರದೇಶ, ಬಿಹಾರ, ಛತ್ತೀಸ್ಗಢ, ಗುಜರಾತ್, ಕರ್ನಾಟಕ, ಮಿಜೋರಾಂ, ಒಡಿಶಾ, ಸಿಕ್ಕಿಂ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ, PMAY-U 2.0 ಯೋಜನೆಯ ‘ಫಲಾನುಭವಿ ನೇತೃತ್ವದ ನಿರ್ಮಾಣ’ (Beneficiary-Led Construction) ಮತ್ತು ‘ಪಾಲುದಾರಿಕೆಯೊಂದಿಗೆ ಕೈಗೆಟುಕುವ ವಸತಿ’ (Affordable Housing in Partnership) ವಿಭಾಗಗಳ ಅಡಿಯಲ್ಲಿ ಈ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಈ ಮನೆಗಳನ್ನು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ, ಅರ್ಹ ನಗರ ಕುಟುಂಬಗಳಿಗಾಗಿ ಉದ್ದೇಶಿಸಲಾಗಿದೆ.
ಸಭೆಯ ಸಂದರ್ಭದಲ್ಲಿ, ವಸತಿ ಪ್ರಸ್ತಾವನೆಗಳನ್ನು ಸಕಾಲದಲ್ಲಿ ಸಲ್ಲಿಸುವುದನ್ನು ಮತ್ತು ಅವುಗಳನ್ನು ತ್ವರಿತವಾಗಿ ಪರಿಶೀಲಿಸಿ ಅನುಮೋದಿಸುವುದನ್ನು ಖಚಿತಪಡಿಸಿಕೊಳ್ಳಲು; ಸಚಿವಾಲಯ, ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ನಡುವೆ ನಿಕಟ ಸಮನ್ವಯವಿರಬೇಕಾದ ಅಗತ್ಯವನ್ನು ಕಾರ್ಯದರ್ಶಿಯವರು ಒತ್ತಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



