
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಶಾ ಅವರ ಆಡಳಿತಾತ್ಮಕ ತಿಳುವಳಿಕೆಯು ಭಾರತದ ಆಂತರಿಕ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿಸಿದೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
2019 ರಿಂದ ದೇಶದ ಗೃಹ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಅಮಿತ್ ಶಾ ಅವರಿಗೆ ಗುರುವಾರ 62 ವರ್ಷ ತುಂಬಿದೆ.
‘ಎಕ್ಸ್’ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಗೃಹ ಸಚಿವ ಅಮಿತ್ ಶಾ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಅವರ ಆಡಳಿತಾತ್ಮಕ ತಿಳುವಳಿಕೆಯು ಭಾರತದ ಆಂತರಿಕ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿಸಿದೆ” ಎಂದು ತಿಳಿಸಿದ್ದಾರೆ.
ಮಾವೋವಾದದ ಪಿಡುಗನ್ನು ನಿರ್ಮೂಲನೆ ಮಾಡುವುದು ಮತ್ತು ಮಾದಕವಸ್ತು ಮುಕ್ತ ಸಮಾಜವನ್ನು ನಿರ್ಮಿಸುವ ಸರ್ಕಾರದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಶ್ರಮಿಸುವುದು ಅಮಿತ್ ಶಾ ಅವರ ಗಮನಾರ್ಹ ಯಶಸ್ಸುಗಳಲ್ಲಿ ಸೇರಿವೆ ಎಂದು ಪ್ರಧಾನಿ ಉಲ್ಲೇಖಿಸಿದ್ದಾರೆ.
“ಅವರು ದೀರ್ಘಕಾಲ ಆರೋಗ್ಯದಿಂದಿದ್ದು, ಜನರ ಸೇವೆ ಮಾಡಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಅವರು ಹೇಳಿದ್ದಾರೆ.
ತಮಗೆ ಶುಭಾಶಯ ಕೋರಿದ ಪ್ರಧಾನಿಗೆ ಧನ್ಯವಾದ ಅರ್ಪಿಸಿದ ಅಮಿತ್ ಶಾ, “ನಿಮ್ಮ ಪ್ರಶಂಸನೀಯ ಮಾತುಗಳು, ರಾಷ್ಟ್ರವನ್ನು ಹೆಮ್ಮೆ, ಸಮೃದ್ಧಿ ಮತ್ತು ಪ್ರಗತಿಯ ಹೊಸ ಶಿಖರಗಳತ್ತ ಕೊಂಡೊಯ್ಯುವ ನಮ್ಮ ಬದ್ಧತೆಯನ್ನು ಇನ್ನಷ್ಟು ಬಲಪಡಿಸುತ್ತವೆ” ಎಂದು ಪ್ರತಿಕ್ರಿಯಿಸಿದ್ದಾರೆ.
‘ಎಕ್ಸ್’ನಲ್ಲಿ ಬರೆದಿರುವ ಅವರು, “ಮಾವೋವಾದವಿರಲಿ ಅಥವಾ ಮಾದಕವಸ್ತುಗಳ ಪಿಡುಗಿರಲಿ; ನಮ್ಮ ರಾಷ್ಟ್ರದ ಶಾಂತಿ ಮತ್ತು ಸಾರ್ವಭೌಮತ್ವಕ್ಕೆ ಬೆದರಿಕೆ ಒಡ್ಡುವ ಯಾವುದೇ ಅಂಶವನ್ನು ನಿಮ್ಮ ನಾಯಕತ್ವದಲ್ಲಿ ಬುಡಸಮೇತ ಕಿತ್ತೊಗೆಯಲು ನಾವು ದೃಢಸಂಕಲ್ಪ ಮಾಡಿದ್ದೇವೆ” ಎಂದು ತಿಳಿಸಿದ್ದಾರೆ.
Warm birthday greetings to Home Minister Shri Amit Shah Ji. His administrative understanding has ensured India’s internal security systems become more effective. Particularly noteworthy are the successes in eliminating the menace of Maoism and in furthering our dream of a society free from drugs. I pray that he is blessed with a long and healthy life in service of the people.
@AmitShah
— Narendra Modi (@narendramodi) October 22, 2026
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



