News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 24th October 2026

×
Home About Us Advertise With s Contact Us

ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯ ಗೋಡೆಗಳ ಮೇಲೆ ದೇಶವಿರೋಧಿ ಬರಹ: ಎಬಿವಿಪಿ ಆಕ್ರೋಶ

ನವದೆಹಲಿ: ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘಟನೆಯನ್ನು ಮತ್ತೆ ಆರಂಭಿಸಬೇಕೆಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಮಯದಲ್ಲಿ ಕ್ಯಾಂಪಸ್‌ನ ಗೋಡೆಗಳ ಮೇಲೆ ದೇಶ ವಿರೋಧಿ ಘೋಷಣೆಗಳನ್ನು ಬರೆಯಲಾಗಿದೆ.

Free Kashmir,  Free Sharjeel Imam,  RSS Go Back, VC Go Back,  Death to RSS/ABVP ಮುಂತಾದ ಘೋಷಣೆಗಳನ್ನು ಗೋಡೆಗಳ ಮೇಲೆ ಬರೆಯಲಾಗಿದೆ.

ಈ ಘೋಷಣೆಗಳಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ವಿಶ್ವವಿದ್ಯಾಲಯ ಆಡಳಿತವು ತಕ್ಷಣ ತನಿಖೆ ನಡೆಸಿ, ಯಾರು ಬರೆದಿದ್ದಾರೆ ಎಂದು ಪತ್ತೆಹಚ್ಚಿ FIR ದಾಖಲಿಸಬೇಕು, ಕ್ಯಾಂಪಸ್‌ನಲ್ಲಿ ರಾಷ್ಟ್ರೀಯ ಏಕತೆ ಮತ್ತು ಸಾಮರಸ್ಯ ಕಾಪಾಡಬೇಕು ಎಂದು ಆಗ್ರಹಿಸಿದೆ.

ವಿಶ್ವವಿದ್ಯಾಲಯ ಆಡಳಿತವು ಈ ಘೋಷಣೆಗಳನ್ನು ಖಂಡಿಸಿದೆ ಮತ್ತು ಯಾರು ಬರೆದಿದ್ದಾರೆ ಎಂದು ಪತ್ತೆಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.  ಕೆಲವು CCTV ಕ್ಯಾಮೆರಾಗಳನ್ನು ಹಾನಿಗೊಳಿಸಲಾಗಿದೆ ಎಂದೂ ವರದಿಯಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top