News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 24th October 2026

×
Home About Us Advertise With s Contact Us

ಭವಿಷ್ಯದ ಸವಾಲುಗಳನ್ನು ಎದುರಿಸಲು ಸನ್ನದ್ಧರಾಗಿರುವಂತೆ ಸೇನೆಗೆ ರಾಜನಾಥ್‌ ಕರೆ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಭೌಗೋಳಿಕ-ರಾಜಕೀಯ ಮತ್ತು ಪ್ರಾದೇಶಿಕ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುವಂತೆ ಹಾಗೂ ಭವಿಷ್ಯದ ಸವಾಲುಗಳನ್ನು ಎದುರಿಸಲು ಸನ್ನದ್ಧರಾಗಿರುವಂತೆ ಸೇನಾ ಕಮಾಂಡರ್‌ಗಳಿಗೆ ಕರೆ ನೀಡಿದ್ದಾರೆ.

ನವದೆಹಲಿಯಲ್ಲಿ ನಿನ್ನೆ ನಡೆದ ಸೇನಾ ಕಮಾಂಡರ್‌ಗಳ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ 20 ರಿಂದ 30 ವರ್ಷಗಳನ್ನು ಒಳಗೊಂಡ ದೀರ್ಘಕಾಲೀನ ಕಾರ್ಯತಂತ್ರದ ದೃಷ್ಟಿಕೋನದ ಅಗತ್ಯವನ್ನು ಒತ್ತಿ ಹೇಳಿದರು. ತಕ್ಷಣದ ಮತ್ತು ಉದ್ಭವಿಸುತ್ತಿರುವ ಸವಾಲುಗಳಿಗೆ ಪ್ರತಿಕ್ರಿಯಿಸಲು ಭಾರತೀಯ ಸೇನೆಯ ಉನ್ನತ ನಾಯಕತ್ವವು ಸದಾ ಸಿದ್ಧವಾಗಿರಬೇಕು. ಬದಲಾಗುತ್ತಿರುವ ಸನ್ನಿವೇಶಗಳಿಗೆ ಅನುಗುಣವಾಗಿ ಸೂಕ್ತ ಸಮಯದಲ್ಲಿ ಹೊಂದಾಣಿಕೆಗಳನ್ನು ಮಾಡಿಕೊಳ್ಳಲು, ಕಾರ್ಯತಂತ್ರಗಳು ಕ್ರಿಯಾಶೀಲ ಮತ್ತು ನಮ್ಯವಾಗಿರಬೇಕು ಎಂದು ಅವರು ಪ್ರತಿಪಾದಿಸಿದರು.

ಬದಲಾಗುತ್ತಿರುವ ಕಾರ್ಯಾಚರಣೆಯ ಅಗತ್ಯಗಳಿಗೆ ಅನುಗುಣವಾಗಿ ಸಜ್ಜುಗೊಂಡಿದ್ದಕ್ಕಾಗಿ ಸಶಸ್ತ್ರ ಪಡೆಗಳನ್ನು ಶ್ಲಾಘಿಸಿದ ರಕ್ಷಣಾ ಸಚಿವರು, ‘ಆಪರೇಷನ್ ಸಿಂದೂರ್’ ನವೀನ ಚಿಂತನೆ, ಉತ್ತಮ ಸಹಯೋಗ ಮತ್ತು ಅತ್ಯುತ್ತಮ ಸಮನ್ವಯವನ್ನು ಪ್ರದರ್ಶಿಸಿತು ಹಾಗೂ ಇದಕ್ಕೆ ಸುಧಾರಿತ ಶಸ್ತ್ರಾಸ್ತ್ರಗಳ ಬೆಂಬಲವಿತ್ತು ಎಂದು ಹೇಳಿದರು.

ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಈ ಕಾರ್ಯಾಚರಣೆಯು ಜಗತ್ತಿಗೆ ನೀಡಿದೆ ಎಂದು ಅವರು ತಿಳಿಸಿದರು. ಆಧುನಿಕ ಯುದ್ಧತಂತ್ರಕ್ಕೆ ಸಮಗ್ರ ವಿಧಾನದ ಅಗತ್ಯವಿದೆ ಎಂದು ಹೇಳಿದ ರಾಜನಾಥ್ ಸಿಂಗ್, ಯಶಸ್ಸು ಎಂಬುದು ಬಹು-ವಲಯ ಸಾಮರ್ಥ್ಯಗಳು ಮತ್ತು ಜಂಟಿ ಕಾರ್ಯಾಚರಣೆಗಳಲ್ಲಿನ ಸುಗಮ ಸಮನ್ವಯವನ್ನು ಅವಲಂಬಿಸಿರುತ್ತದೆ ಎಂದು ಒತ್ತಿ ಹೇಳಿದರು.

2025-26ರ ಆರ್ಥಿಕ ವರ್ಷದಲ್ಲಿ ರಕ್ಷಣಾ ಉತ್ಪಾದನೆಯು ದಾಖಲೆಯ 1 ಲಕ್ಷದ 78 ಸಾವಿರ ಕೋಟಿ ರೂಪಾಯಿಗಳನ್ನು ತಲುಪಿದೆ ಮತ್ತು ರಕ್ಷಣಾ ರಫ್ತು ಸುಮಾರು 38 ಸಾವಿರ ಕೋಟಿ ರೂಪಾಯಿಗಳೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ರಕ್ಷಣಾ ಸಚಿವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ, ರಾಜನಾಥ್ ಸಿಂಗ್ ಅವರು ‘ಭೂ ಯುದ್ಧ ಸಿದ್ಧಾಂತ’ವನ್ನು ಬಿಡುಗಡೆ ಮಾಡಿದರು. ಇದು ಯುದ್ಧದ ಬದಲಾಗುತ್ತಿರುವ ಸ್ವರೂಪ ಮತ್ತು ಭವಿಷ್ಯದ ಸಂಘರ್ಷಗಳಿಂದ ಉಂಟಾಗುವ ಸವಾಲುಗಳನ್ನು ಎದುರಿಸಲು ಭಾರತೀಯ ಸೇನೆಯನ್ನು ಸಿದ್ಧಪಡಿಸುವ ಸಮಗ್ರ ಚೌಕಟ್ಟನ್ನು ಒದಗಿಸುತ್ತದೆ. ಇದೇ ವೇಳೆ, ಅವರು ವಾರ್ಷಿಕ ‘ಯುನೈಟೆಡ್ ನೇಷನ್ಸ್ ಜರ್ನಲ್’ ಅನ್ನು ಅನಾವರಣಗೊಳಿಸಿದರು ಮತ್ತು ವಿಶ್ವಸಂಸ್ಥೆಯ ಕಾರ್ಯಾಚರಣೆಗಳಲ್ಲಿ ಸೇವೆ ಸಲ್ಲಿಸುವಾಗ ಗಮನಾರ್ಹ ಕೊಡುಗೆ ನೀಡಿದ ಭಾರತೀಯ ಸೇನಾ ಸಿಬ್ಬಂದಿಯನ್ನು ಸನ್ಮಾನಿಸಿದರು.

ಬದಲಾಗುತ್ತಿರುವ ಕಾರ್ಯಾಚರಣೆಯ ಅಗತ್ಯಗಳಿಗೆ ಅನುಗುಣವಾಗಿ ಸಜ್ಜುಗೊಂಡ ಸಶಸ್ತ್ರ ಪಡೆಗಳನ್ನು ಶ್ಲಾಘಿಸಿದ ರಕ್ಷಣಾ ಸಚಿವರು, ‘ಆಪರೇಷನ್ ಸಿಂದೂರ್’ ನವೀನ ಚಿಂತನೆ, ಉತ್ತಮ ಸಹಯೋಗ ಮತ್ತು ಅತ್ಯುತ್ತಮ ಸಮನ್ವಯವನ್ನು ಪ್ರದರ್ಶಿಸಿತು ಹಾಗೂ ಇದಕ್ಕೆ ಸುಧಾರಿತ ಶಸ್ತ್ರಾಸ್ತ್ರಗಳ ಬೆಂಬಲವಿತ್ತು ಎಂದು ತಿಳಿಸಿದರು.

ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಭಾರತ ಹಿಂಜರಿಯುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಈ ಕಾರ್ಯಾಚರಣೆಯು ಜಗತ್ತಿಗೆ ರವಾನಿಸಿದೆ ಎಂದು ಅವರು ಹೇಳಿದರು. ಆಧುನಿಕ ಯುದ್ಧತಂತ್ರಕ್ಕೆ ಸಮಗ್ರ ವಿಧಾನದ ಅಗತ್ಯವಿದೆ ಎಂದು ಪ್ರತಿಪಾದಿಸಿದ ಸಿಂಗ್, ಯಶಸ್ಸು ಎಂಬುದು ಬಹು-ವಲಯ ಸಾಮರ್ಥ್ಯಗಳು ಮತ್ತು ಜಂಟಿ ಕಾರ್ಯಾಚರಣೆಗಳಲ್ಲಿನ ಸುಗಮ ಸಮನ್ವಯವನ್ನು ಅವಲಂಬಿಸಿರುತ್ತದೆ ಎಂದು ಒತ್ತಿ ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top