
ನವದೆಹಲಿ: ಪ್ರವಾದಿ ಮುಹಮ್ಮದ್ ಅವರನ್ನು ಅವಹೇಳನ ಮಾಡುವಂತಹ ಫೇಸ್ಬುಕ್ ಪೋಸ್ಟ್ ಹಾಕಿದ್ದಾರೆ ಎಂಬ ಆರೋಪದ ಮೇಲೆ, ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಶ್ರೀಲಂಕಾದ ತಮಿಳು ಹಿಂದೂ ವಲಸೆ ಕಾರ್ಮಿಕ, 24 ವರ್ಷದ ಅನೋಜನ್ ಶಿವರಾಜ ಅವರ ಮೇಲಿದ್ದ ಎಲ್ಲಾ ಆರೋಪಗಳನ್ನು ಸೌದಿ ಅರೇಬಿಯಾ ಕೈಬಿಟ್ಟಿದೆ.
ನವೆಂಬರ್ 9 ರಂದು ಸೌದಿ ಅರೇಬಿಯಾದ ಸಾರ್ವಜನಿಕ ಅಭಿಯೋಜನಾ ಕಚೇರಿಯು (Public Prosecution Office) ಎಲ್ಲಾ ಆರೋಪಗಳನ್ನು ಹಿಂಪಡೆಯಲು ನಿರ್ಧರಿಸಿದ್ದು, ಇದರೊಂದಿಗೆ ಅವರ ವಿರುದ್ಧದ ಕಾನೂನು ಪ್ರಕ್ರಿಯೆಗಳು ಅಂತ್ಯಗೊಂಡಿವೆ.
ಶ್ರೀಲಂಕಾದ ವಿದೇಶಾಂಗ ಸಚಿವಾಲಯವು ಬುಧವಾರ ಈ ಬೆಳವಣಿಗೆಯನ್ನು ಪ್ರಕಟಿಸಿದ್ದು, ಅನೋಜನ್ ಅವರನ್ನು ತಾಯ್ನಾಡಿಗೆ ಕರೆತರುವ ಸಿದ್ಧತೆಗಳು ನಡೆಯುತ್ತಿವೆ ಎಂದು ಖಚಿತಪಡಿಸಿದೆ.
ಸೌದಿ ಅರೇಬಿಯಾದಲ್ಲಿನ ಎಲ್ಲಾ ಕಾನೂನು ಪ್ರಕ್ರಿಯೆಗಳು ಮತ್ತು ದಂಡನೆಗಳಿಂದ ಮುಕ್ತರಾದ ನಂತರ, ಅವರು ಸುರಕ್ಷಿತವಾಗಿ ಮರಳಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ವಿದೇಶಾಂಗ ವ್ಯವಹಾರಗಳು, ವಿದೇಶಿ ಉದ್ಯೋಗ ಮತ್ತು ಪ್ರವಾಸೋದ್ಯಮ ಸಚಿವ ವಿಜಿತಾ ಹೆರಾತ್ ತಿಳಿಸಿದ್ದಾರೆ. ಮುಂದಿನ ಒಂದು-ಎರಡು ವಾರಗಳಲ್ಲಿ ಅನೋಜನ್ ಶ್ರೀಲಂಕಾಗೆ ಮರಳಬಹುದು ಎಂದು ಅವರು ಸುಳಿವು ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



