ಚಂಡೀಗಢ: ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅಧ್ಯಕ್ಷತೆಯಲ್ಲಿ ಉತ್ತರ ಭಾರತದಲ್ಲಿ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಕುರಿತು ಅ.31ರಂದು ಗುರ್ಗಾಂವ್ನಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ವ್ಯಾಪಕ ಚರ್ಚೆಗಳ ಮೂಲಕ ಹೊಸ ನೀತಿಯ ಕರಡು ತಯಾರಿಸಲಾಗಿದ್ದು, 2 ಲಕ್ಷ ಜನರು ತಮ್ಮ ಸಲಹೆಗಳನ್ನು ಹಂಚಿಕೊಂಡಿದ್ದಾರೆ ಎಂದು ಹರಿಯಾಣ ಸಚಿವ ರಾಮ್ ಬಿಲಾಸ್ ಶರ್ಮಾ ತಿಳಿಸಿದ್ದಾರೆ.
ಈ ಹಿಂದೆ ಯುಪಿಎ ಸರ್ಕಾರದ ಶಿಕ್ಷಣ ನೀತಿಯಿಂದ ಶಿಕ್ಷಣದ ಗುಣಮಟ್ಟದಲ್ಲಿ ಇಳಿಕೆ ಸಂಭವಿಸಿದೆ. ಪ್ರಸ್ತುತ ಬಿಜೆಪಿ ಸರ್ಕಾರವು ಹರಿಯಾಣದಲ್ಲಿ ಹಿಂದಿನ ವ್ಯವಸ್ಥೆಯಲ್ಲಿ ಬದಲಾವಣೆ ತರಲು ನಿರ್ಧರಿಸಿದೆ. ಸಾಮಾನ್ಯ ಮೌಲ್ಯಮಾಪನದ ಅನುಪಸ್ಥಿತಿಯಲ್ಲಿ ವಿದ್ಯಾರ್ಥಿಗಳ ಬೆಳವಣಿಗೆಗೆ ಅಡ್ಡಿಯಾಗುತ್ತಿದ್ದು, ಹಿಂದಿನ ವ್ಯವಸ್ಥೆಯ ಬದಲಾವಣೆ ಅಗತ್ಯ ಎಂದು ಶರ್ಮಾ ಹೇಳಿದ್ದಾರೆ.
ಈವರೆಗೆ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ರಚಿಸಲಾಗುತ್ತಿರುವ ಹೊಸ ಯೋಜನೆಯಿಂದ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆ ತರಲು ಅನುಕೂಲವಾಗಲಿದೆ ಎಂದು ಸಚಿವೆ ಸೃತಿ ಇರಾನಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.