News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 25th November 2026

×
Home About Us Advertise With s Contact Us

2026 ರ ಹಬ್ಬದ ಋತುವಿನಲ್ಲಿ ಓಡಿಸಲಾಗಿದೆ 18,000 ಹೆಚ್ಚುವರಿ ರೈಲು

ನವದೆಹಲಿ: ಈ ವರ್ಷದ ಅಕ್ಟೋಬರ್‌ನಿಂದ ನವೆಂಬರ್‌ವರೆಗಿನ ಹಬ್ಬದ ಅವಧಿಯಲ್ಲಿ, ಭಾರತೀಯ ರೈಲ್ವೆಯು ಸುಮಾರು 18,000 ಹೆಚ್ಚುವರಿ ರೈಲುಗಳನ್ನು ಓಡಿಸಿದ್ದು, ಪ್ರತಿದಿನ ಲಕ್ಷಾಂತರ ಪ್ರಯಾಣಿಕರಿಗೆ ಪ್ರಯಾಣ ಸೌಲಭ್ಯ ಕಲ್ಪಿಸಿದೆ.

ಭಾರತೀಯ ರೈಲ್ವೆಯ ಪ್ರಕಾರ, 26 ದಿನಗಳ ಈ ಪ್ರಮುಖ ಹಬ್ಬದ ಅವಧಿಯಲ್ಲಿ ಸುಮಾರು 20 ಕೋಟಿ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸಿದ್ದಾರೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇಕಡಾ 8 ರಷ್ಟು ಹೆಚ್ಚಳವಾಗಿದೆ.

ದುರ್ಗಾ ಪೂಜೆಯ ಸಂದರ್ಭದಲ್ಲಿ, ಸರಾಸರಿ ದೈನಂದಿನ ಪ್ರಯಾಣಿಕರ ಸಂಖ್ಯೆ 70 ಲಕ್ಷದಿಂದ 76 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಅದು ತಿಳಿಸಿದೆ. ದೀಪಾವಳಿಯ ಸಮಯದಲ್ಲಿ ಈ ಸಂಖ್ಯೆ 71 ಲಕ್ಷದಿಂದ 74 ಲಕ್ಷಕ್ಕೆ ಹಾಗೂ ಛತ್ ಹಬ್ಬದ ಸಂದರ್ಭದಲ್ಲಿ 75 ಲಕ್ಷದಿಂದ 82 ಲಕ್ಷಕ್ಕೆ ಹೆಚ್ಚಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top