ನವದೆಹಲಿ: ದೀಪಾವಳಿಯ ವೇಳೆ ಪಟಾಕಿ ಸಿಡಿಸುವುದಕ್ಕೆ ನಿಷೇಧ ಹೇರಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಹಬ್ಬಗಳನ್ನು ಸಂಭ್ರಮಿಸುವ ಸಾಮಾನ್ಯ ಮನುಷ್ಯನ ಹಕ್ಕನ್ನು ಕಿತ್ತುಕೊಳ್ಳವುದು ಅಪಾಯಕಾರಿ ಎಂದು ಅದು ಅಭಿಪ್ರಾಯಪಟ್ಟಿದೆ.
ದೀಪಾವಳಿ ವೇಳೆ ವಾಯು ಮಾಲಿನ್ಯ ಉಂಟು ಮಾಡುವ ಪಟಾಕಿಯನ್ನು ನಿಷೇಧಿಸುವಂತೆ 3 ಮಕ್ಕಳು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಮುಖ್ಯ ನ್ಯಾಯಮೂರ್ತಿ ಎಚ್.ಎಲ್ ದತ್ತು ಅವರ ನೇತೃತ್ವದ ನ್ಯಾಯಪೀಠ, ಜನರು ತಮ್ಮ ಮನೆಯ ಮುಂದೆ ಪಟಾಕಿ ಸಿಡಿಸುವುದನ್ನು ನಿಲ್ಲಿಸಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ ಎಂದಿದೆ.
ಒಂದು ವೇಳೆ ಪಟಾಕಿ ಹೊಡೆಯುವುದನ್ನು ನಿಲ್ಲಿಸಲು ಪ್ರಯತ್ನಿಸಿದರೂ, ಅದು ನನ್ನ ಹಕ್ಕು ಎಂದ ಜನ ವಾದಿಸುತ್ತಾರೆ. ಅಂತಹ ನಿಷೇಧಗಳು ಅಪಾಯಕಾರಿ ಸನ್ನಿವೇಶಗಳನ್ನು ಸೃಷ್ಟಿಸಬಹುದು ಎಂದು ನ್ಯಾ.ದತ್ತು ಅಭಿಪ್ರಾಯಪಟ್ಟಿದ್ದಾರೆ.
ಪಟಾಕಿ ಹೊಡೆಯಲು ನಿರ್ದಿಷ್ಟ ಸಮಯ ಮತ್ತು ಜಾಗವನ್ನು ಗೊತ್ತು ಮಾಡಿ ಎಂದು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರ ವಾದವನ್ನೂ ಸುಪ್ರೀಂ ತಳ್ಳಿ ಹಾಕಿದೆ.
ಪ್ರತಿಯೊಬ್ಬರಿಗೂ ನೆಹರೂ ಮೈದಾನ ಅಥವಾ ಇತರೆಡೆ ಹೋಗಿ ಪಟಾಕಿ ಸಿಡಿಸಿ ಎಂದು ಹೇಳಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.
ಅಷ್ಟೇ ಅಲ್ಲದೇ ವಾಯುಮಾಲಿನ್ಯದ ಬಗೆಗಿನ ಜಾಹೀರಾತುಗಳನ್ನು ಸರಿಯಾಗಿ ನೀಡದ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.