ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರೇರಣೆ ಪಡೆದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಈ ವರ್ಷ ಅಕಾಲಿಕ ಮಳೆ, ಬೆಳೆ ನಾಶದಿಂದ ಉಂಟಾಗಿರುವ ಬಿಕ್ಕಟ್ಟಿನ ಕುರಿತು ರಾಜ್ಯಾದ್ಯಂತ ರೈತರನ್ನು ತಲುಪಲು ರೇಡಿಯೋ ಸಹಾಯ ಪಡೆದುಕೊಂಡಿದ್ದಾರೆ.
ಈ ರೇಡಿಯೋ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಚೌಹಾಣ್ ಅವರು ರೈತರು ಆತ್ಮವಿಶ್ವಾಸ ಕಳೆದುಕೊಳ್ಳದೇ, ಧೈರ್ಯ ಹಾಗೂ ತಾಳ್ಮೆಯಿಂದ ಸಮಸ್ಯೆಗಳನ್ನು ಎದುರಿಸಬೇಕೆಂದು ಸಲಹೆ ನೀಡಿದ್ದಾರೆ. ನವೆಂಬರ್ ತಿಂಗಳ ಮೊದಲ ವಾರದಲ್ಲಿ ವಿಧಾನಸಭೆಯ ವಿಶೇಷ ಅಧಿವೇಶನ ನಡೆಯಲಿದ್ದು, ಸರ್ಕಾರ ರೈತರಿಗೆ ವರ್ಧಿತ ಪರಿಹಾರ ನೀಡಲು ಅನುಮೋದನೆ ಪಡೆಯಲಿದೆ ಎಂದು ಹೇಳಿದ್ದಾರೆ.
ಬೀಜ ಮತ್ತು ಗೊಬ್ಬರ ವಿತರಣೆ, ಬೆಳೆ ವಿಮೆ, ನೆರವು ವಿತರಣೆ ಮೂಲಕ ಪರಿಹಾರ ನೀಡಲಿದ್ದು, ಬಡ್ಡಿ ರಹಿತ ಸಾಲ, ಹೆಣ್ಣು ಮಕ್ಕಳ ಮದುವೆಗೆ ಸಹಾಯ ಮಾಡಲಿದೆ ಎಂದು ಚೌಹಾಣ್ ಹೇಳಿದ್ದಾರೆ. ರೈತರ ಶ್ರಮದಿಂದ ರಾಜ್ಯವು ಸತತ ನಾಲ್ಕು ವರ್ಷಗಳಲ್ಲಿ ಶೇ.20 ಸರಾಸರಿಯಲ್ಲಿ ಕೃಷಿ ಬೆಳವಣಿಗೆ ಹೊಂದಿದೆ. ಕೃಷಿಯನ್ನು ಲಾಭದಾಯಕ ವ್ಯಾಪಾರವನ್ನಾಗಿಸಲು ನಿರ್ಧರಿಸಲಾಗಿದ್ದು, ಕೃಷಿಗೆ ನೀರಾವರಿ ಅತ್ಯಗತ್ಯ ಎಂದು ಅವರು ಹೇಳಿದ್ದಾರೆ.
ಸರ್ಕಾರ ರೈತರಿಗೆ ಎಲ್ಲಾ ರೀತಿಯ ಪರಿಹಾರ ಒದಗಿಸಲಿದೆ ಎಂದು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.