ಮುಂಬಯಿ: ಅಬ್ಸರ್ವರ್ ರಿಸರ್ಚ್ ಫೌಂಡೇಶನ್ನ ಮುಖ್ಯಸ್ಥ ಸುಧೀಂದ್ರ ಕುಲಕರ್ಣಿ ಮುಂದಿನ ವಾರ ಪಾಕಿಸ್ಥಾನಕ್ಕೆ ತೆರಳಲಿದ್ದಾರೆ. ಪಾಕಿಸ್ಥಾನದ ಮಾಜಿ ವಿದೇಶಾಂಗ ಸಚಿವ ಖುರ್ಷಿದ್ ಮೊಹಮ್ಮದ್ ಕಸೌರಿ ಅವರ ಪುಸ್ತಕವನ್ನು ಬಿಡುಗಡೆ ಮಾಡುವ ಸಲುವಾಗಿ ಕರಾಚಿಗೆ ತೆರಳುತ್ತಿದ್ದಾರೆ.
ತಮ್ಮ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಕಸೌರಿ ಮುಂಬಯಿಗೆ ಆಗಮಿಸಿದ್ದ ವೇಳೆ ಶಿವಸೇನೆಯ ಕಾರ್ಯಕರ್ತರು ಕುಲಕರ್ಣಿ ಅವರ ಮುಖಕ್ಕೆ ಪೇಂಟ್ ಹಚ್ಚಿದ್ದರು. ಈ ಘಟನೆ ಭಾರೀ ವಿವಾದ ಸೃಷ್ಟಿಸಿತ್ತು.
ಕಸೌರಿಯ ಪುಸ್ತಕ ಬಿಡುಗಡೆ ಸಮಾರಂಭದ ಆಹ್ವಾನವನ್ನು ತಾನು ಸ್ವೀಕರಿಸಿದ್ದು, ನ.2ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತ ಹಾಗೂ ಪಾಕಿಸ್ಥಾನದ ಪ್ರಮುಖರೊಂದಿಗೆ ಪಾಲ್ಗೊಳ್ಳುವುದಾಗಿ ಕುಲಕರ್ಣಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.