ನವದೆಹಲಿ: ಮುಂಬರುವ 2016ರ ಏಷ್ಯಾ ಕಪ್ ಟಿ20 ಪಂದ್ಯಾವಳಿಯು ಬಾಂಗ್ಲಾದೇಶದಲ್ಲಿ ನಡೆಯಲಿದ್ದು, 2018ರ ಏಷ್ಯಾ ಕಪ್ ಸರಣಿಯ ಆತಿಥ್ಯವನ್ನು ಭಾರತ ವಹಿಸಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕುರ್ ಹೇಳಿದ್ದಾರೆ.
ಸಿಂಗಾಪುರದಲ್ಲಿ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ ಠಾಕುರ್ ಪಾಲ್ಗೊಂಡಿದ್ದು, 2018ರಲ್ಲಿ ಭಾರತದಲ್ಲಿ ಏಷ್ಯಾ ಕಪ್ ನಡೆಸುವ ಬಗ್ಗೆ ಪ್ರಸ್ತಾಪಿಸಿದ್ದು, ಇದಕ್ಕೆ ಒಪ್ಪಿಗೆಯನ್ನು ಪಡೆದಿದ್ದಾರೆ. ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಏಷ್ಯಾ ಕಪ್ ಟಿ20 ಪಂದ್ಯಾವಳಿ ಏಷ್ಯಾದ ರಾಷ್ಟ್ರಗಳಿಗೆ ತಾಲೀಮು ಪಂದ್ಯವಾಗಲಿದೆ.
2019ರಲ್ಲಿ ನಡೆಯಲಿರುವ ವಿಶ್ವಕಪ್ನ ದೃಷ್ಟಿಯಿಂದ 2018ರ 50 ಓವರ್ಗಳ ಏಷ್ಯಾ ಕಪ್ ಏಕದಿನ ಪಂದ್ಯಾವಳಿಯನ್ನು ಭಾರತದಲ್ಲಿ ಆಯೋಜಿಸಲಾಗಿದೆ ಎಂದು ಅನುರಾಗ್ ಠಾಕುರ್ ತಿಳಿಸಿದ್ದಾರೆ. ಸಭೆಯಲ್ಲಿ ನಾಲ್ಕು ಏಷ್ಯನ್ ಟೆಸ್ಟ್ ರಾಷ್ಟ್ರಗಳಾದ ಭಾರತ, ಪಾಕಿಸ್ಥಾನ, ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಕ್ರಿಕೆಟ್ ಅಭಿವೃದ್ಧಿಗೆ ಏಷ್ಯಾ ಕ್ರಿಕೆಟ್ ಕೌನ್ಸಿಲ್ಗೆ ತಮ್ಮ ವಾರ್ಷಿಕ ಆದಾಯದ ಶೇ.2ರಷ್ಟು ಕೊಡುಗೆಯಾಗಿ ನೀಡಲು ನಿರ್ಧರಿಸಿವೆ.
ಈ ವೇಳೆ ಧರ್ಮಶಾಲಾವನ್ನು ಎ.ಸಿ.ಸಿ.ಯ ಕೇಂದ್ರ ಘಟಕವನ್ನಾಗಿ ಮಾಡಲು ಪ್ರಸ್ತಾಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.