ಚೆನ್ನೈ: ಎಐಎಡಿಎಂಕೆ ಸರ್ಕಾರದ ವಿರುದ್ಧ ಟೀಕೆ ಮಾಡಿದ ತಮಿಳು ಜಾನಪದ ಕಲಾವಿದನೊಬ್ಬನನ್ನು ಚೆನ್ನೈ ಪೊಲೀಸರು ಬಂಧಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಕೋವನ್, ತಿರುಚಿ ಮೂಲದ ಎಂಕೆಐಕೆ ತಂಡದ ಸದಸ್ಯರಾಗಿದ್ದು, ಶುಕ್ರವಾರ 2 ಗಂಟೆಗೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚಿಗೆ ಹಾಡೊಂದನ್ನು ಬಿಡುಗಡೆ ಮಾಡಿದ್ದ ಅವರು, ಇದರಲ್ಲಿ ತಮಿಳುನಾಡು ಮದ್ಯದ ದಾಸನಾಗಿದೆ, ಶಿಕ್ಷಣ ಮತ್ತು ಆಹಾರದ ದರ ಏರಿಕೆಯಾಗುತ್ತಿದೆ ಎಂದು ಟೀಕಿಸಿದ್ದರು, ಈ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಇದು ಜಯಲಲಿತಾ ಅವರ ಎಐಎಡಿಯಂಕೆ ಸರ್ಕಾರವನ್ನು ಕೆರಳಿಸಿದ್ದು, ಇದೀಗ ಕೋವನ್ ಅವರನ್ನು ಬಂಧಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.