ಬೆಳ್ತಂಗಡಿ: ಶ್ರೀ ಅರುವಕೊರಗಪ್ಪ ಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನ, ಅರುವ ಇದರ 8ನೇ ವಾರ್ಷಿಕೋತ್ಸವ ಎ.೧೨ ರಂದು ನಡೆಯಲಿದೆ. ಈ ಸಂದರ್ಭ ನಾಲ್ವರಿಗೆ ಅರುವ ಪ್ರಶಸ್ತಿ ನೀಡಲಾಗುವುದು ಎಂದು ಪ್ರತಿಷ್ಠಾನದಕೋಶಾಧಿಕಾರಿ ಕೆ.ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.
ಅವರು ಬುಧವಾರ ಇಲ್ಲಿನ ವಾರ್ತಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರ ನೀಡಿದರು. ಸ್ತ್ರೀ ವೇಷಧಾರಿ ಪುಂಡರೀಕಾಕ್ಷ ಉಪಾಧ್ಯಾಯ, ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ಭಂಡಾರಿ, ವೈದ್ಯ ಡಾ.ಎನ್.ಎಂ.ತುಳುಪುಳೆ, ವಾಸ್ತುಶಿಲ್ಪಿ ಶ್ರೀಧರ ಆಚಾರ್ಯ ಪಿಲ್ಯ ಇವರಿಗೆ ಅರುವ ಪ್ರಶಸ್ತಿ ನೀಡಲಾಗುವುದು. ಸಂಜೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ವಸಂತ ಬಂಗೇರ ವಹಿಸಲಿದ್ದು ಸಂಸದ ನಳೀನ್ ಕುಮಾರ್ ಕಟೀಲು, ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮತ್ತಿತರರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭ ೭ ನೇ ವರ್ಷದ ಸಾರ್ವಜನಿಕ ಉಚಿತ ಶ್ರೀ ಶನೀಶ್ವರ ಪೂಜೆ ನಡೆಯಲಿದೆ. ರಾತ್ರಿ ಆಪುಜಿ ಪಂಡ ದೀಪುಜಿ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.
ಗೋಷ್ಠಿಯಲ್ಲಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ವತ್ಸಲಾ ಭಂಡಾರಿ ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.