ನವದೆಹಲಿ : ಸೈದ್ಧಾಂತಿಕ ಅಸಹಿಷ್ಣುತೆ ಹೆಚ್ಚುತ್ತಿದೆ ಎಂದು ಮೋದಿಯವರನ್ನು ಟೀಕಿಸುವುದು ಇದೇ ಮೊದಲಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಮ್ಮ ಫೇಸ್ ಬುಕ್ನಲ್ಲಿ ಬರೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರನ್ನು ವಿರೋಧಿಸಿ ಸೈದ್ಧಾಂತಿಕ ಅಸಹಿಷ್ಣುತೆ ಟೀಕೆಗಳು ವ್ಯಕ್ತವಾಗುತ್ತಿರುವುದು ಹೊಸತಲ್ಲ. 2002ರಿಂದಲೂ ಮೋದಿಯವರನ್ನು ಈ ಕುರಿತು ಗುರಿ ಮಾಡಲಾಗುತ್ತಿದೆ. ಅಲ್ಲದೆ ದೇಶದಲ್ಲಿ ಅಸಹಿಷ್ಣುತೆ ತಲ್ಲಣಿಸುತ್ತಿದೆ ಎಂದು ದೇಶದ ಬಗ್ಗೆ ವ್ಯವಸ್ಥಿತ ಅಪಪ್ರಚಾರ ಮಾಡಲಾಗುತ್ತಿದೆ. ಈ ವರ್ತನೆಗಳು ಭಾರತದ ಅಭಿವೃದ್ಧಿಗೆ ಮಾರಕವಾಗುತ್ತಿದೆ.
ದಾದ್ರಿಯನ್ನು ಸರಕಾರದ ವಿರುದ್ಧ ಬಳಸುವ ನೀಚ ಕಾರ್ಯತಂತ್ರವಾಗಿ ರೂಪಿಸಿದ್ದು, ರಾಜಕೀಯ ವಿರೋಧಿಗಳಿಗೆ ತಮ್ಮನ್ನು ರಾಜಕೀಯವಾಗಿ ಎದುರಿಸಲು ಆಗದ ಕಾರಣ ಈ ರೀತಿಯ ಮಾರ್ಗವನ್ನು ಕಂಡುಕೊಂಡಿದ್ದಾರೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.