ಪಾಟ್ನಾ: ದೇಶದಲ್ಲಿ ಬೆಳೆಯುತ್ತಿರುವ ಅಸಹಿಷ್ಣುತೆ ಕುರಿತು ಚರ್ಚೆಗಳು ತೀವ್ರಗೊಂಡಿದ್ದರ ಹಿನ್ನೆಲೆಯಲ್ಲಿ ಮೋದಿಯವರು ಬಿಹಾರದಲ್ಲಿ ಇಂದು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಬಿಹಾರದ ಪರಿವರ್ತನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘1984 ರ ಸಿಖ್ ನರಮೇಧದ ನಂತರ ಕಾಂಗ್ರೆಸ್ಗೆ ಸಹಿಷ್ಣುತೆ ಬಗ್ಗೆ ಮಾತನಾಡಲು ಯಾವ ಅಧಿಕಾರವೂ ಇಲ್ಲ. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅಸಹಿಷ್ಣುತೆ ಹೆಚ್ಚುತ್ತಿದೆ ಎಂದು ಆರೋಪಿಸುತ್ತಿದ್ದಾರೆ. ಸೋನಿಯಾರವರೇ ನಿಮಗೆ 1984ರ ಗಲಭೆ ನೆನಪಿದೆಯಾ ? ದೆಹಲಿಯಲ್ಲಿ ಏನಾಗಿತ್ತು ? ಆಗ ಎಷ್ಟು ಜನ ಸಿಖ್ಖರು ತಮ್ಮ ಪ್ರಾಣವನ್ನು ಕಳೆದುಕೊಂಡರು ? ಕಾಂಗ್ರೆಸ್ನ ಮೇಲೂ ಗಂಭೀರ ಆರೋಪಗಳನ್ನು ಮಾಡಲಾಯಿತು. ಆದರೆ ಇಂದು ವಿಪರ್ಯಾಸವೆಂದರೆ ಕಾಂಗ್ರೆಸ್ ಸಹಿಷ್ಣುತೆಯ ಬಗ್ಗೆ ಮಾತನಾಡುತ್ತಿದೆ’ ಎಂದರು.
ಬಿಹಾರದಲ್ಲಿ 40 ಕ್ಷೇತ್ರಗಳಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್, ಅಲ್ಲಿ ಯಾವುದೇ ಅಸ್ತಿತ್ವವನ್ನು ಹೊಂದಿಲ್ಲ. ಈ 40 ಸ್ಥಾನಗಳನ್ನು ನೀಡಿರುವ ನಿತೀಶ್ ಕುಮಾರ್ ಹಾಗೂ ಲಾಲು ಪ್ರಸಾದ್ ಅವರಿಗೆ ಧನ್ಯವಾದ ಕೋರುತ್ತೇನೆ ಎಂದರು. ಈಗಾಗಲೇ ಜನರು ನಿತೀಶ್ ಕುಮಾರ್ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಜನರೇ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು 25 ತಿಂಗಳುಗಳ ಕಾಲ ನಡೆಸಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಶ್ನಿಸುವ ಬದಲು ಕಾಂಗ್ರೆಸ್ ತನ್ನ 25 ವರ್ಷಗಳ ಕಾರ್ಯಗಳ ಕುರಿತು ಮಾಹಿತಿ ನೀಡಲಿ ಎಂದು ಮೋದಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.