ಚೆನ್ನೈ: ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದ್ದು, ಅದರ ವಿರುದ್ಧ ಹೋರಾಡಲು ನಾನು ನನ್ನ ರಾಷ್ಟ್ರೀಯ ಪ್ರಶಸ್ತಿಯನ್ನು ಹಿಂದಿರುಗಿಸುವುದಿಲ್ಲ ಎಂದು ನಟ ಕಮಲ್ ಹಾಸನ್ ಸ್ಪಷ್ಟಪಡಿಸಿದ್ದಾರೆ. ಎಲ್ಲ ಧರ್ಮವನ್ನು ನಾನು ನಂಬುತ್ತಿದ್ದರೂ ತಾನು ಧಾರ್ಮಿಕನಲ್ಲ. ಆದರೆ ಅಸಹಿಷ್ಣುತೆ ಬಗ್ಗೆ ಪ್ರತಿ 5 ವರ್ಷಗಳಿಗೊಮ್ಮೆ ಚಚಿಸುವುದು ಅಗತ್ಯ ಎಂದು ಅವರು ಹೇಳಿದ್ದಾರೆ.
ಪ್ರತಿಷ್ಠಿತ ಬರಹಗಾರರು ಅಸಹಿಷ್ಣುತೆ ವಿರುದ್ಧ ಹೋರಾಡುವ ದಿಸೆಯಲ್ಲಿ ತಮ್ಮ ಪ್ರಶಸ್ತಿಗಳನ್ನು ಮರಳಿಸುವುದರಿಂದ ಯಾವುದೇ ಬದಲಾವಣೆಯಾಗದು. ಬದಲಾಗಿ ಪ್ರಶಸ್ತಿ ನೀಡುವ ಸರ್ಕಾರ, ಜನರ ಪ್ರೀತಿ ಗೌರವಗಳಿಗೆ ಅವಮಾನ ಮಾಡಿದಂತೆ ಎಂದು ಹೇಳಿದ್ದಾರೆ.
ಪ್ರಶಸ್ತಿಗಳನ್ನು ಹಿಂದಿರುಗಿಸುವವರು ತಮ್ಮ ಪ್ರಶಸ್ತಿಗಳನ್ನು ಹಿಂದಿರುಗಿಸದೆ, ತಮ್ಮ ಪ್ರಶಸ್ತಿಗಳನ್ನು ತಮ್ಮಲ್ಲಿ ಉಳಿಸಿಕೊಂಡು ಅಸಹಿಷ್ಣುತೆ ಬಗ್ಗೆ ಪ್ರತಿಭಟಿಸಬೇಕು. ಪ್ರಶಸ್ತಿಗಳನ್ನು ಹಿಂದಿರುಗಿಸುವುದೇ ಒಂದು ದಾರಿ ಅಲ್ಲ. ಅದರ ಬದಲು ಜಾಗೃತಗೊಳಿಸುವಂತಹ ಲೇಖನಗಳನ್ನು ಬರೆಯುವ ಮೂಲಕ ಗಮನ ಸೆಳೆಯಬೇಕು. ಆ ಮೂಲಕ ಲೇಖಕರು ಪ್ರತಿಭಟಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.