ಮಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರು ಮತ್ತು ಪ್ರಾಂಶುಪಾಲರುಗಳ ವೇತನ ತಾರತಮ್ಯದ ಸಮಸ್ಯೆಯ ಕುರಿತಾಗಿ ಸಾಂಕೇತಿಕವಾಗಿ ಅರ್ಧ ದಿನ ಪ್ರತಿಭಟನೆ ನಡೆಸಿದ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ನಿನ್ನೆ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ಶಾಸಕರ ಉಪಸ್ಥಿತಿಯಲ್ಲಿ ಸಭೆ ಸೇರಿ ತಮ್ಮ ಸಮಸ್ಯೆಯ ಪರಿಹಾರೋಪಾಯಗಳ ಕುರಿತಾಗಿ ಚರ್ಚೆ ನಡೆಸಿದರು.
ವೇತನ ತಾರತಮ್ಯದ ಸಮಸ್ಯೆಯನ್ನು ಅರ್ಥೈಸಿಕೊಂಡು ಹಿಂದಿನ ಸರ್ಕಾರ ನೇಮಿಸಿದ ಶ್ರೀ ಕುಮಾರ್ ನಾಯಕ್ ಸಮಿತಿಯು ಸಲ್ಲಿಸಿರುವ ವಿಸ್ತೃತವಾದ ವರದಿಯನ್ನು ಸ್ವಾಗತಿಸುತ್ತಾ, 6ನೇ ವೇತನ ಅಯೋಗ ವೇತನ ತಾರತಮ್ಯದ ಸಮಸ್ಯೆಯನ್ನು ಗುರುತಿಸಿ ವೇತನ ತಾರತಮ್ಯ ಸಮಿತಿಗೆ ಈ ಸಮಸ್ಯೆಯನ್ನು ಒಪ್ಪಿಸಲು ಸೂಚಿಸಿರುವ ಹಿನ್ನಲೆಯಲ್ಲಿ ಹಾಗೂ ಮಾಧ್ಯಮಗಳಲ್ಲಿ ವರದಿಯಾಗಿರುವಂತೆ 3 ತಿಂಗಳಲ್ಲಿ ಈ ಸಮಸ್ಯೆಗೆ ಪರಿಹಾರ ಒದಗಿಸುವ ಸರಕಾರದ ಭರವಸೆಯನ್ನು ಅಭಿನಂದಿಸಿದರು.
ಕೂಡಲೇ ಶಿಕ್ಷಣ ಸಚಿವರು ಶಿಕ್ಷಕ ಪ್ರತಿನಿಧಿ ಶಾಸಕರುಗಳ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿವಿಧ ಶಿಕ್ಷಕ ಸಂಘಟನೆಗಳ ಪ್ರತಿನಿಧಿಗಳ ಸಭೆಯನ್ನು ಮೌಲ್ಯಮಾಪನ ಪ್ರಕ್ರಿಯೆ ಕೊನೆಗೊಳ್ಳುವುದರ ಮೊದಲೇ ಕರೆದು ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು ಹಾಗೂ ಮುಖ್ಯಮಂತ್ರಿಗಳನ್ನು ಈ ಕುರಿತಾಗಿ ಭೇಟಿ ಮಾಡಿ ಮನವರಿಕೆ ಮಾಡುವುದಾಗಿ ನಿರ್ಣಯಿಸಲಾಯಿತು ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.