ಸುಳ್ಯ: ಮಕ್ಕಳು ಮತ್ತು ಮಹಿಳೆಯರು ಸಮಾಜದ ಅವಿಭಾಜ್ಯ ಅಂಗ. ಇವರ ಮೇಲೆ ನಡೆಯುವ ದೌರ್ಜನ್ಯಗಳನ್ನು ಸಮಾಜ ಒಗ್ಗೂಡಿ ಪ್ರತಿಭಟಿಸಬೇಕು. ಹೆಣ್ಣು ಸಬಲೆಯಾಗುವ ನಿಟ್ಟಿನಲ್ಲಿ ಅವರಿಗೆ ಮಾರ್ಗದರ್ಶನ ನೀಡಿ ದೇಶಕ್ಕೆ ಕೊಡುಗೆಯಾಗುವ ರೀತಿಯಲ್ಲಿ ರೂಪಿಸಬೇಕಾಗಿದೆ ಎಂದು ಜಿ.ಪಂ.ಅಧ್ಯಕ್ಷೆ ಆಶಾ ತಿಮ್ಮಪ್ಪ ಹೇಳಿದರು.
ಅವರು ದ.ಕ.ಜಿ.ಪಂ. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಸುಳ್ಯ, ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯದ ಪುರಭವನದಲ್ಲಿ ನಡೆದ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ವಿರುದ್ಧ ಬೃಹತ್ ಆಂದೋಲನ ಹಾಗೂ ವಿಶ್ವ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಹಿಳೆಯರ ಕಳ್ಳ ಸಾಗಾಣಿಕೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿ, ವೇಶ್ಯಾಟಿಕೆಗೆ ತಳ್ಳಲಾಗುತ್ತಿದೆ. ಮಕ್ಕಳನ್ನು ಅಪಹರಿಸಿ ಅವರನ್ನು ಅಂಗವಿಕಲರನ್ನಾಗಿ ಮಾಡಿ ಭಿಕ್ಷಾಟನೆಗೆ ಕೂರಿಸಲಾಗುತ್ತದೆ. ಇವುಗಳ ವಿರುದ್ಧ ಹೋರಾಡಲು ಸಾರ್ವಜನಿಕರು ಸಹಕರಿಸಬೇಕಾಗಿದೆ . ಆಯೋಗದ ಮೂಲಕವೂ ಇಂತಹ ದುಷ್ಟರನ್ನು ಹತ್ತಿಕ್ಕಿ ಅವರಿಗೆ ಶಿಕ್ಷೆ ನೀಡುವ ಕೆಲಸ ಮಾಡಲಾಗುತ್ತಿದೆ ಎಂದರು.
ಮಹಿಳೆಯರ ಮತ್ತು ಮಕ್ಕಳ ಮಾರಾಟ ಮತ್ತು ಸಾಗಾಟ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿ ಪ್ರೇಮಾನಂದ ಕಲ್ಮಾಡಿ ಮಾತನಾಡಿದರು. ವೇದಿಕೆಯಲ್ಲಿ ನಿವೃತ್ತ ಸಿಡಿಪಿಒ ನಾರಾಯಣ ನೀರಬಿದಿರೆ, ತಾ.ಪಂ.ಸದಸ್ಯರುಗಳಾದ ವಿಮಲಾ ರಂಗಯ್ಯ, ತಾರಾ ಮಲ್ಲಾರ, ರಾಜೀವಿ ಉದ್ದಂಪಾಡಿ, ಜಯಂತಿ ಉಪಸ್ಥಿತರಿದ್ದರು.
ಮೇಲ್ವಿಚಾರಕಿಯಾದ ರವಿಶ್ರೀ ಪ್ರಸನ್ನ ಸ್ವಾಗತಿಸಿ, ಪ್ರಭಾರ ಸಿಡಿಪಿಒ ಸುಕನ್ಯಾ ಬಿ. ಪ್ರಸ್ತಾವನೆಗೈದರು. ಶೈಲಜಾ ದಿನೇಶ್ ವಂದಿಸಿದರು. ಅನುರಾಧಾ ಕುರುಂಜಿ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.