ಅಹ್ಮದಾಬಾದ್: 2014ರ ಚುನಾವಣಾ ನೀತಿ ಉಲ್ಲಂಘನೆ ಪ್ರಧಾನಿ ನರೇಂದ್ರ ಮೋದಿ ಮೇಲೆ ಆಪಾದಿಸಿ ಮೋದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ.
ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿದ್ದ ಅರ್ಜಿಯನ್ನು ಪ್ರಶ್ನಿಸಿ ಎಎಪಿ ಕಾರ್ಯಕರ್ತ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ನ್ಯಾ. ಜೆ.ಬಿ. ಪರ್ದಿವಾಲಾ ನೇತೃತ್ವದ ನ್ಯಾಯಪೀಠ ಅರ್ಜಿ ತಿರಸ್ಕರಿಸಿದೆ. ಎಎಪಿ ಕಾರ್ಯಕರ್ತ ನಿಶಾಂತ್ ವರ್ಮಾ ಅವರ ಅರ್ಜಿ ವಜಾಗೊಳಿಸಿದ ನ್ಯಾ. ಪರ್ದಿವಾಲಾ ಅವರು ಮ್ಯಾಜಿಸ್ಟ್ರೇಟ್ಗೆ ಅರ್ಜಿ ತಿರಸ್ಕರಿಸಲು ಪೂರ್ಣ ಹಕ್ಕಿದ್ದು, ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
2014 ರ ಎಪ್ರಿಲ್ 30ರಂದು ನಡೆದ 26 ಲೋಕಸಭಾ ಸ್ಥಾನಗಳ ಚುನಾವಣೆ ಸಂದರ್ಭ ಮತ ಚಲಾವಣೆ ನಂತರ ಬಿಜೆಪಿ ಅಭ್ಯರ್ಥಿಯಾಗಿದ್ದ ಮೋದಿಯವರು ಪತ್ರಿಕಾಗೋಷ್ಠಿ ಆಯೋಜಿಸಿದ್ದು, ಚುನಾವಣಾ ನೀತಿ ಉಲ್ಲಂಘಟನೆ, ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಅರ್ಜಿ ಸಲ್ಲಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.