ನವದೆಹಲಿ: ದೇಶದಲ್ಲಿ ಹಣದುಬ್ಬರ ಹೆಚ್ಚುತ್ತಿದ್ದು, ಅದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಭಾರತೀಯ ರಿಸರ್ವ್ ಬ್ಯಾಂಕ್ ಜೊತೆ ವಿತ್ತೀಯ ಚಾಕಟ್ಟು ಒಪ್ಪಂದ (Monitary Policy Framework Agreement) ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೆಹಲಿಯಲ್ಲಿ ಇಂದು ನಡೆದ ಎಕನಾಮಿಕ್ ಕಾನ್ಕ್ಲೇವ್ನಲ್ಲಿ ಮಾತನಾಡಿದ ಮೋದಿ, ದೇಶದ ಆರ್ಥಿಕ ಬಲವರ್ಧನೆ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಜನ್-ಧನ್ ಯೋಜೆನೆಯಡಿ ಸುಮಾರು 26 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲಾಗಿದೆ. ಬ್ಯಾಂಕಿಂಗ್ ವಲಯದಲ್ಲಿ 19 ಕೋಟಿ ಜನರನ್ನು ತರಲಾಗಿದ್ದು, ಇದು ದೇಶದ ಅಭಿವೃದ್ಧಿಯ ಪ್ರಗತಿ ಏರಿಕೆಯಾಗಿದ್ದು, ಇದರಿಂದ ಹಣದುಬ್ಬರ ಕಡಿಮೆಯಾಗಿದೆ ಎಂದರು.
ಫೆ.20, 2015ರಂದೇ ಈ ಒಪ್ಪಂದ ಮಾಡಲಾಗಿದ್ದು, ಬೆಲೆಗಳ ಸ್ಥಿರತೆ ಕಾಯ್ದುಕೊಳ್ಳುವ ಹೊಸ ನೀತಿ ಇದಾಗಿದೆ. ಆರ್ಬಿಐ ಕೇಂದ್ರ ಸರ್ಕಾರದ ಯೋಜನೆಗಳಿಗೆ ಬ್ಯಾಂಕುಗಳಲ್ಲಿ ಬಡ್ಡಿಯನ್ನು ನಿಗದಿಪಡಿಸಲಿದ್ದು, 2016ರ ಒಳಗೆ ಹಣದುಬ್ಬರ ದರವನ್ನು ಶೇ.6ಕ್ಕೆ ಇಳಿಸುವ ಉದ್ದೇಶವಾಗಿದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.