ಶ್ರೀನಗರ: ಕಾಶ್ಮೀರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಅಭಿವೃದ್ಧಿಗಾಗಿ 80,000 ಕೋಟಿ ರೂ. ಪ್ಯಾಕೇಜ್ ಬಿಡುಗಡೆಗೊಳಿಸಿದ್ದಾರೆ.
ಇಲ್ಲಿನ ಶೇರ್-ಎ- ಕಾಶ್ಮೀರ್ ಕ್ರೀಡಾಂಗಣದಲ್ಲಿ ನಡೆದ ಸಮಾವೇಶದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಅವರು ಕಾಶ್ಮೀರದ ಯುವಕರು ಐಐಟಿ, ಐಐಎಂ, ಐಎಎಸ್ ಮೊದಲಾದ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದು ಇಲ್ಲಿನ ಜನತೆಗೆ ಉದ್ಯೋಗಾವಕಾಶಗಳ ಅಗತ್ಯವಿದೆ. ಪರ್ವೇಜ್ ರಸೂಲ್ರಂತಹ ಪ್ರತಿಭಾವಂತರಿಗೆ ಏನನ್ನುಬೇಕಾದರೂ ಮಾಡಲು ಸಿದ್ಧ. ಕಾಶ್ಮೀರದ ಪ್ರಗತಿ ಮತ್ತು ಅಭಿವೃದ್ಧಿಯು ಪ್ರಜಾಪ್ರಭುತ್ವ ಮತ್ತು ಮಾನವೀಯತೆಯ ಆಧಾರದಲ್ಲಿ ಹೊಂದಬೇಕು ಎಂದು ಹೇಳಿದ್ದಾರೆ.
ಇದು ಕೇವಲ ಆರಂಭಿಕ ನೆರವು ಆಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ಯಾಕೇಜ್ಗಳ ನೆರವು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಪ್ಯಾಕೇಜ್ನ್ನು ಒಂದು ಪ್ರಬಲ ಕಾಶ್ಮೀರ ನಿರ್ಮಾಣಕ್ಕಾಗಿ ಬಳಸಲು ಬಯಸುವುದಾಗಿ ಅಭಿಪ್ರಾಯಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಕೇಂದ್ರ ಸರ್ಕಾರದ ಪ್ರಮುಖ ಏಜೆಂಡಾ ಆಗಿದೆ ಎಂದು ತಿಳಿಸಿದ್ದಾರೆ.
ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎಂಬುದು ಸರ್ಕಾರದ ಮೂಲ ಮಂತ್ರವಾಗಿದ್ದು, ದೆಹಲಿಯ ಖಜಾನೆಯ ಜೊತೆಗೆ ಈ ಹೃದಯವನ್ನೂ ಅರ್ಪಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಕಾಶ್ಮೀರ ಕಣಿವೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳು ನಡೆಯುವ ದಿನ ಶೀಘ್ರ ಬರುವಂತೆ ಆಶಿಸಿದ್ದಾರೆ. ಅಲ್ಲದೇ ಕಾಶ್ಮೀರವನ್ನು ಒಂದು ಉನ್ನತ ಪ್ರವಾಸಿ ತಾಣವಾನ್ನಾಗಿ ಮಾರ್ಪಡಿಸುವ ಬಗ್ಗೆ ಜನರಲ್ಲಿ ಹಂಚಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.