ಮಂಗಳೂರು : ಭಾರತೀಯ ಜನತಾ ಪಾರ್ಟಿ ವತಿಯಿಂದ ನ.9ಸೋಮವಾರ ಬೆಳಿಗ್ಗೆ ಗಂ.10 ರಿಂದ ಸಾಯಂಕಾಲ 5 ರವರೆಗೆ ಕರ್ನಾಟಕ ರಾಜ್ಯದ ಹಾಗೂ ದ.ಕ.ಜಿಲ್ಲೆಯ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯದ ವಿರುದ್ಧ ಬೃಹತ್ ಧರಣಿ ಸತ್ಯಾಗ್ರಹವನ್ನು ಮಂಗಳೂರಿನ ಪುರಭವನದ ಆವರಣದ ಒಳಗಡೆ ಇರುವ ಅಂಬೇಡ್ಕರ್ ಪ್ರತಿಮೆಯ ಮುಂಭಾಗದಲ್ಲಿ ನಡೆಯಲಿದೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಳೆದ ಒಂದು ತಿಂಗಳ ಅವಧಿಯಲ್ಲಿ ಏಳು ಜನರ ಭೀಕರ ಕೊಲೆ, ಹತ್ತಕ್ಕೂ ಹೆಚ್ಚು ಜನರ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಕಾನೂನು ಸುವ್ಯವಸ್ಥೆಗೆ ಬಹು ದೊಡ್ಡ ಸವಲಾಗುತ್ತಿರುವ ಇಂತಹ ವಾತಾವರಣದಿಂದ ಮಂಗಳೂರಿನ ಜನತೆ ಬೆಚ್ಚಿ ಬಿದ್ದಿದ್ದಾರೆ. ಅಹಿತಕರ ಘಟನೆಗಳು ಮಂಗಳೂರು ನಗರದ ಸುತ್ತಮುತ್ತ ಹಾಗೂ ಸಂಪೂರ್ಣ ರಾಜ್ಯದಲ್ಲಿ ಅರಾಜಕತೆ ಹೆಚ್ಚಾಗಿ ಸಾರ್ವಜನಿಕರು ಭಯಪಡುವಂತಹ ವಾತಾವರಣ ನಿರ್ಮಾಣಗೊಂಡ ಪ್ರಯುಕ್ತ ಕರ್ನಾಟಕ ಸರಕಾರ ಮತ್ತು ಜಿಲ್ಲೆಯ ಮಂತ್ರಿವರ್ಯರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಈ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ .
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.