ಪ್ಯಾರಿಸ್ : ಫ್ರಾನ್ಸ್ನ ರಾಜಧಾನಿ ಪ್ಯಾರಿಸ್ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು ಸುಮಾರು 153 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಅನೇಕರು ತೀವ್ರತರವಾಗಿ ಗಾಯಗೊಂಡಿದ್ದಾರೆ. ಹಲವರನ್ನು ಒತ್ತೆಯಾಳುಗಳನ್ನಾಗಿರಿಸಿಕೊಂಡಿದ್ದರೆನ್ನಲಾಗಿದೆ.
ಇಸಿಸ್ ಉಗ್ರರು ಸಿರಿಯಾ ದಾಳಿಯ ಪ್ರತೀಕಾರವಾಗಿ ಈ ದಾಳಿಯನ್ನು ಮಾಡಿರುವುದಾಗಿ ಟ್ವೀಟ್ ಮಾಡಿದ್ದಾರೆನ್ನಲಾಗಿದೆ.
ಪ್ಯಾರಿಸ್ ಸೇರಿದಂತೆ ಫ್ರಾನ್ಸ್ನ ಎಲ್ಲಾ ನಗರಗಳಲ್ಲೂ ಕಟ್ಟೆಚ್ಚರ ವಹಿಸಿ ಮಿಲಿಟರಿ ಪಡೆಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಸುಮಾರು 5 ರಿಂದ 7 ಜನ ಭಯೋತ್ಪಾದಕರು ಈ ಕೃತ್ಯದಲ್ಲಿ ಪಾಲ್ಗೊಂಡಿದ್ದಾರೆನ್ನಲಾಗಿದೆ.
ಬಟ್ಲಕಾನ್ ಹಾಲ್ನಲ್ಲಿ ಮನೋರಂಜನಾ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ.
ಪ್ಯಾರಿಸ್ನ ಸುಮಾರು 6 ಕಡೆಗಳಲ್ಲಿ ದಾಳಿ ನಡೆಸಲಾಗಿದ್ದು, ಎರಡು ಪ್ರಬಲ ಬಾಂಬ್ಗಳನ್ನು ಫುಟ್ಬಾಲ್ ಮ್ಯಾಚ್ ನಡೆಯುತ್ತಿದ್ದ ಸ್ಟೇಡೆ ಡಿ ಫ್ರಾನ್ಸ್ ಸ್ಟೇಡಿಯಂನಲ್ಲಿ ಸ್ಫೋಟಿಸಲಾಗಿದೆ. ಫುಟ್ಬಾಲ್ ಮ್ಯಾಚ್ ವೀಕ್ಷಿಸುತ್ತಿದ್ದ ಫ್ರಾನ್ಸ್ ಅಧ್ಯಕ್ಷ ಹೊಲಾಂಡೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಕೃತ್ಯವನ್ನು ವಿಶ್ವ ನಾಯಕರು ಖಂಡಿಸಿದ್ದು, ಎಲ್ಲರೂ ಒಗ್ಗಟ್ಟಾಗಿ ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕು, ಇದು ಮನುಕುಲದ ಮೇಲೆ ನಡೆದ ದಾಳಿ ಎಂದು ವಿಶ್ವ ನಾಯಕರು ಟ್ವೀಟ್ ಮೂಲಕ ಖಂಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.