ನವದೆಹಲಿ: ಕೇಂದ್ರ ಸರ್ಕಾರದ ನಮಾಮಿ ಗಂಗಾ ಯೋಜನೆ ಅತ್ಯಂತ ನಿಧಾನ ಗತಿಯಲ್ಲಿ ಸಾಗುತ್ತಿದೆ ಎಂಬ ಆಪಾದನೆಯನ್ನು ತಳ್ಳಿ ಹಾಕಿರುವ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿ, ಎನ್ಡಿಎ ಸರ್ಕಾರವು ಅಕ್ಟೋಬರ್ 2018 ರ ಒಳಗೆ ಗಂಗಾ ನದಿಯನ್ನು ವಿಶ್ವದ ಅತ್ಯಂತ ಪರಿಶುದ್ಧ ನದಿಯನ್ನಾಗಿ ಪರಿವರ್ತಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಭಾರತೀಯ ಕೈಗಾರಿಕಾ ಒಕ್ಕೂಟ ಆಯೋಜಿಸಿದ್ದ ವಾಟರ್ ಇನ್ನೋವೇಶನ್ ಶೃಂಗಸಭೆ 2015 ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಕೆನ್-ಬೇತ್ವಾ ನದಿ ಜೋಡಣೆಯ ಮೊದಲ ಯೋಜನೆ ಜನವರಿ-ಫೆಬ್ರವರಿ 2016ರಲ್ಲಿ ಆರಂಭಗೊಳ್ಳಲಿದೆ. ಇದರ ಪೂರ್ವ ತಯಾರಿ ಈಗಾಗಲೇ ಪೂರ್ಣಗೊಂಡಿದೆ ಎಂದು ಹೇಳಿದ್ದಾರೆ.
ಉತ್ತರಪ್ರದೇಶದ ಕೆನ್-ಬೆತ್ವಾ ಯೋಜನೆ ಬಳಿಕ ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳ ನಡುವಿನ ದಾಮನ್ಗಂಗಾ-ಪಿಂಜಾಲ್ ಮತ್ತು ಪರ-ತಾಪಿ-ನರ್ಮದಾ ನದಿಗಳ ಜೋಡಣೆ ಕಾರ್ಯದ ಯೋಜನೆಯನ್ನು ಮುಂದುವರೆಸಲಾಗುವುದು ಎಂದು ತಿಳಿಸಿದ್ದಾರೆ.
ಕ್ಲೀನ್ ಗಂಗಾ ಯೋಜನೆಗೆ ಬೆಂಬಲ ನೀಡುವಂತೆ ಭಾರತೀಯ ಕೈಗಾರಿಕಾ ಒಕ್ಕೂಟಕ್ಕೆ ಉಮಾ ಭಾರತಿ ಈ ವೇಳೆ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.