ಪಾಟ್ನಾ: ಬಿಹಾರ ಚುನಾವಣೆಯಲ್ಲಿ ಜಯಗಳಿಸಿದ ಜೆಡಿಯು ನಾಯಕ ನಿತೀಶ್ ಕುಮಾರ್ ನ.20ರಂದು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನಿಸಿದ್ದಾರೆ.
ನಾಲ್ಕು ದಿನಗಳ ಕಾಲ ನಡೆದ ಛಾತ್ ಪೂಜಾ ಹಬ್ಬದ ಬಳಿಕ ನಿತೀಶ್ ಅವರು ಮೋದಿಗೆ ಕರೆ ಮಾಡಿ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾಣೆಯಲ್ಲಿ ಮಹಾಘಟಬಂಧನ್ ಜಯ ಸಾಧಿಸಿದ್ದಾಗ, ಮೋದಿ ಅವರು ನಿತೀಶ್ಗೆ ಕರೆ ಮಾಡಿ ಅಭಿನಂದಿಸಿದ್ದರು.
ಪಾಟ್ನಾದ ಹೃದಯ ಭಾಗದಲ್ಲಿರುವ ಮಹಾತ್ಮಾ ಗಾಂಧಿ ಮೈದಾನದಲ್ಲಿ ನಿತೀಶ್ ಕುಮಾರ್ ತಮ್ಮ ಪ್ರಮಾಣವಚನ ಸಮಾರಂಭ ನಡೆಸಲು ನಿಶ್ಚಯಿಸಿದ್ದಾರೆ. ಪಕ್ಷದ ಹಾಗೂ ವಿರೋಧ ಪಕ್ಷದ ಪ್ರಮುಖ ನಾಯಕರು ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಈ ಸಮಾರಂಭಕ್ಕೆ ಇತರ ಪ್ರಮುಖ ನಾಯಕರಾದ ಎಲ್.ಕೆ. ಅಡ್ವಾಣಿ, ಶತ್ರುಘನ್ ಸಿನ್ಹಾ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಎಂಕೆ ನಾಯಕ ಸ್ಟ್ಯಾಲಿನ್ ಮುಂತಾದವರನ್ನೂ ಆಹ್ವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.