ಮುಂಬಯಿ: 2015-16ನೇ ಸಾಲಿನ ಎಬಿವಿಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಡಾ. ನಾಗೇಶ್ ಠಾಕುರ್ (ಶಿಮ್ಲಾ) ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಬಿದಿರೆ(ಬೆಂಗಳೂರು) ಆಯ್ಕೆಯಾಗಿದ್ದಾರೆ. ಮುಂಬಯಿಯ ಎಬಿವಿಪಿ ಕೇಂದ್ರ ಕಚೇರಿಯಲ್ಲಿ ಚುನಾವಣಾ ಅಧಿಕಾರಿ ಡಾ. ಚಗನ್ಭಾಯ್ ಪಟೇಲ್ ಇದನ್ನು ಘೋಷಿಸಿದ್ದಾರೆ.
ನ.26ರಿಂದ ಭುವನೇಶ್ವರದಲ್ಲಿ ನಡೆಯಲಿರುವ ರಾಷ್ಟ್ರೀಯ ಪರಿಷತ್ನ 61ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
ಹಿಮಾಚಲ ಪ್ರದೇಶದವರಾಗಿರುವ ಡಾ.ನಾಗೇಶ್ ಠಾಕುರ್ ಟಿಬೆಟ್ ವಿವಾದ, ಕಾಶ್ಮೀರ ಮತ್ತು ಪಂಜಾಬ್ನ ಭಯೋತ್ಪಾದನೆ ವಿಚಾರ, ನೈತಿಕ ಮೌಲ್ಯ ಹಾಗೂ ನೀತಿ ಸಂಹಿತೆಗಳಂತಹ ವಿಚಾರಗಳ ಬಗ್ಗೆ ಯುವಕತರಲ್ಲಿ ಅಪಾರ ಅರಿವು ವಹಿಸುತ್ತಿದ್ದಾರೆ. ಈ ಹಿಂದೆ ಅವರು ಹಿಮಾಚಲ ಪ್ರದೇಶದ ಎಬಿವಿಪಿ ರಾಜ್ಯಾಧ್ಯಕ್ಷ ಹಾಗೂ 2004-07ರ ವರೆಗೆ ಎಬಿವಿಪಿ ರಾಷ್ಟೀಯ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕದ ತುಮಕೂರಿನ ಬಿದಿರೆಯವರಾದ ವಿನಯ್ ಬಿದಿರೆ, 1998ರಿಂದ ಎಬಿವಿಪಿಯ ಕಾರ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ತುಮಕೂರು ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಕರ್ನಾಟಕದ ರಾಜ್ಯ ಕಾರ್ಯದರ್ಶಿಯಾಗಿ ಹಾಗೂ ಎಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ವೃತ್ತಿಒರ ಶಿಕ್ಷಣ ಸಮಸ್ಯೆ, ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಹಾಸ್ಟೆಲ್ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಶ್ರಮಿಸಿದ್ದಾರೆ. ಅವರು 2014ರಲ್ಲಿ ಯುವಜನ ಮತ್ತು ಕ್ರೀಡಾ ಸಚಿವಾಲಯದ ಪ್ರತಿನಿಧಿಗಳ ತಂಡದಲ್ಲಿ ಒಬ್ಬ ಸದಸ್ಯರಾಗಿ ಚೀನಾಕ್ಕೆ ಬೇಟಿ ನಿಡಿದ್ದರು. ಪ್ರಸ್ತುತ ಅವರು ಕರ್ನಾಟಕ ಮತ್ತು ತೆಲಂಗಾಣದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಸುತ್ತಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.