ಮೂಡುಬಿದಿರೆ : ಸಾರ್ವಜನಿಕ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೂಡುಬಿದಿರೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಇದೇ ನ. 22ರಿಂದ 24ರವರೆಗೆ ರಾಜ್ಯ ಮಟ್ಟದ 17 ವರ್ಷ ವಯೋಮಿತಿಯ ಪ್ರೌಢಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದೆ.
ರಾಜ್ಯದ 26 ಶೈಕ್ಷಿಣಿಕ ಜಿಲ್ಲೆಗಳಿಂದ ಸುಮಾರು 2500 ಕ್ರೀಡಾಪಟುಗಳು ಹಾಗೂ ಸುಮಾರು 500 ಮಂದಿ ಅಧಿಕಾರಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಈ ಕ್ರೀಡಾಕೂಟದ ನಿರ್ವಹಣೆಯ ಅಧಾರದ ಮೇಲೆ ಮುಂದಿನ ರಾಷ್ಟ್ರೀಯ ಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ರಾಜ್ಯ ತಂಡದ ಆಯ್ಕೆಯನ್ನು ನಡೆಸಲಾಗುವುದು.
ನವೆಂಬರ್ 22ರಂದು ಸಂಜೆ 4-00 ಗಂಟೆಗೆ ಕ್ರೀಡಾಕೂಟ ಉದ್ಘಾಟನೆಯನ್ನು ರಾಜ್ಯ ಸರಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್ ನೆರವೇರಿಸಲಿದ್ದು, ಯುವಜನ ಸೇವಾ ಮತ್ತು ಕ್ರೀಡಾ ಸಚಿವರಾದ ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಲಿರುವರು. ಜಿಲ್ಲಾ ಉಸ್ತುವಾರಿ ಸಚಿವರು ಸೆರಿದಂತೆ ಹಲವು ಜನಪ್ರತಿನಿಧಿಗಳು ಭಾಗವಹಿಸಲಿರುವರು. ಕ್ರೀಡಾಕೂಟದ ಯಶಸ್ವಿಗಾಗಿ ಎಲ್ಲಾ ಪೂರ್ವತಯಾರಿಯನ್ನು ಸುಸಜ್ಜಿತವಾಗಿ ನಡೆಸಲಾಗಿದೆ ಎಂದು ಕ್ರೀಡಾಕೂಟದ ಕಾರ್ಯಾಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರು ತಿಳಿಸಿರುತ್ತಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ವಾಲ್ಟರ್ ಡಿಮೆಲ್ಲೊ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಕೇಶವ್, ಕ್ಷೇತ್ರ ಶಿಕ್ಷಣಾಧಿಕಾರಿ ಗೋವಿಂದ ಮಡಿವಾಳ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.