ಬೆಳ್ತಂಗಡಿ : ನಾಗರಿಕ ಸೇವಾ ಟ್ರಸ್ಟ್ ಗುರುವಾಯನಕೆರೆ ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ನ. 30 ರಂದು ಆಯೋಜಿಸಲಾಗಿದ್ದ ಹಕ್ಕೊತ್ತಾಯ ಸಮಾವೇಶವನ್ನು ಜಿಲ್ಲೆಯ ಪ್ರಕ್ಷುಬ್ದ ಪರಿಸ್ಥಿತಿಯ ಹಿನ್ನಲೆಯಲ್ಲಿ ಡಿ. 14 ಕ್ಕೆ ಮುಂದೂಡಲಾಗಿದೆ ಎಂದು ನಾಗರಿಕ ಸೇವಾ ಟ್ರಸ್ಟ್ನ ಅಧ್ಯಕ್ಷ ಹಾಗೂ ಸಮಿತಿಯ ಪ್ರಧಾನ ಸಂಚಾಲಕರಾದ ಕೆ. ಸೋಮನಾಥ್ ನಾಯಕ್ ತಿಳಿಸಿದ್ದಾರೆ.ಅವರು ಬೆಳ್ತಂಗಡಿಯ ವಾರ್ತಾಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಚಾರ ತಿಳಿಸಿದರು.
ಭೂಹಗರಣಗಳ ಬಗ್ಗೆ ಹಾಗೂ ಹಲವಾರು ಅವ್ಯವಹಾರಗಳ ಬಗ್ಗೆ ಟ್ರಸ್ಟ್ ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಸರಕಾರ ನಡೆಸುತ್ತಿರುವ ತನಿಖೆಯನ್ನು ತ್ವರಿತಗೊಳಿಸಬೇಕು. ದೇವಸ್ಥಾನದ ರಾಷ್ಟ್ರೀಕರಣಕ್ಕೆ ಕ್ರಮ ಕೈಗೊಳ್ಳಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಬೃಹತ್ ಹಕ್ಕೊತ್ತಾಯ ಸಮಾವೇಶ ಆಯೋಜಿಸಲಾಗುತ್ತಿದ್ದು ಇದಕ್ಕೆ ಎಲ್ಲ ಸಿದ್ದತೆಗಳೂ ಪೂರ್ಣಗೊಂಡಿತ್ತು.
ಆದರೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನಲೆಯಲ್ಲಿ ಸಮಾವೇಶವನ್ನು ಮುಂದೂಡಲಾಗಿದೆ. ಡಿ. 14 ರಂದು ನಡೆಯುವ ಸಮಾವೇಶದಲ್ಲಿ ರಾಜ್ಯದ ಹಿರಿಯ ಚಿಂತಕರು, ಹೋರಾಟಗಾರರು ಭಾಗವಹಿಸಲಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 20 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವ್ಯವಹಾರಗಳ ಬಗ್ಗೆ ಕಿರು ಹೊತ್ತಗೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಆರ್. ರಮೇಶ್, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ರವಿಕುಮಾರ್ ಬರಮೇಲು, ಮಲೆಕುಡಿಯರ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಬಾಲಕೃಷ್ಣ ನಿಡ್ಲೆ, ಕರಾವಳಿ ಮಹಿಳಾ ಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷೆ ವಿದ್ಯಾ ಎಸ್ ನಾಯಕ್, ದಲಿತ ಅಭಿವೃದ್ದಿ ಸಮಿತಿಯ ಸಂಚಾಲಕ ಕೆ. ಸೋಮ, ವಿಠಲ ಗೌಡ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.