ಜಮ್ಮು: ಇಲ್ಲಿನ ವೈಷ್ಣೋದೇವಿ ದೇವಾಲಯದ ದರ್ಶನ ಪಡೆದು ಹಿಂದಿರುಗುತ್ತಿದ್ದ ವೇಳೆ ಭಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲಟ್ ಸೇರಿ ೭ ಮಂದಿ ಸಾವನ್ನಪ್ಪಿದ್ದಾರೆ.
ಜಮ್ಮು-ಕಾಶ್ಮೀರದ ಕಟ್ರಾ ಸಮೀಪ ನ.23ರಂದು ಮಧ್ಯಾಹ್ನ 12.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಹಿಮಾಲಯ ಹೆಲಿ ಸರ್ವೀಸ್ ಎಂಬ ಖಾಸಗಿ ಸಂಸ್ಥೆಯ ಈ ಹೆಲಿಕಾಪ್ಟರ್ನಲ್ಲಿದ್ದ ಮಹಿಳಾ ಪೈಲಟ್ ಸುಮಿತ್ರಾ ವಿಜಯನ್ ಹಾಗೂ ೬ ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ತಾಂತ್ರಿಕ ದೋಷದಿಂದ ಘಟನೆ ಸಂಭವಿಸಿರಬಹುದೆಂದು ಅಂದಾಜಿಸಲಾಗಿದ್ದು, ಕಾರಣ ಇನ್ನೂ ತಿಳಿದು ಬಂದಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.