ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ಗುರುವಾರದಿಂದ ಆರಂಭಗೊಳ್ಳಲಿದ್ದು, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಶಾಸನ ರಾಷ್ಟ್ರದ ಹಿತಾಸ್ಕತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸಂಸತ್ ಅಧಿವೇಶನವು ಬಹಳ ಸಲೀಸಾಗಿ ಸಕಾರಾತ್ಮಕವಾಗಿ, ರಚನಾತ್ಮಕವಾಗಿ ಕಾರ್ಯ ನಿರ್ವಹಿಸಬೇಕು. ಇದು ಜನರು ನಿರೀಕ್ಷೆಗಳನ್ನು ಪೂರೈಸಬೇಕು ಎಂದು ಸರ್ಕಾರದ ಸರ್ವಪಕ್ಷಗಳ ಸಭೆಯಲ್ಲಿ ಪ್ರತಿಪಕ್ಷಗಳಿಗೆ ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಪ್ರತಿಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಎಸ್ಟಿ ಕುರಿತು ಚರ್ಚಿಸಲಿದ್ದು, ಪ್ರತಿಪಕ್ಷಗಳು ತಮ್ಮ ಅನುಮಾನಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಮೋದಿ ಹೇಳಿದ್ದಾರೆ.
ಜಿಎಸ್ಟಿ ಜೊತೆಗೆ ವ್ಯಾಪಾರ ಮತ್ತು ಆರ್ಥಿಕ ಸುಧಾರಣೆ ವಿಚಾರಗಳಿಗೂ ಸರ್ಕಾರ ಆದ್ಯತೆ ನೀಡಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಸರ್ವಪಕ್ಷಗಳ ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಎಡರಂಗದ ಸೀತಾರಾಮ ಯಚೂರಿ, ಎಡರಂಗ ನಾಯಕ ಡಿ.ರಾಜಾ, ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್, ಎಲ್ಜೆಪಿ ನಾಯಕ ಚಿರಾಗ್ ಪಾಸ್ವಾನ್, ಜೆ.ಡಿ.ಯು.ನ ಕೆ.ಸಿ.ತ್ಯಾಗಿ ಹಾಗೂ ಐಎನ್ಎಲ್ಡಿ ನಾಯಕ ದುಷ್ಯಂತ್ ಚೌಟಾಲಾ ಹಾಜರಿದ್ದರು.
ಲೋಕಸಾಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಬುಧವಾರ ಸಂಜೆ ಮತ್ತೊಂದು ಸಭೆ ಕರೆದಿದ್ದು, ನಂತರ ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ಇನ್ನೆರಡು ಸಭೆಗಳು ನಡೆಯಲಿವೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.