ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು, ಎರಡು ದಿನಗಳ ಕಾಲ ಸಂವಿಧಾನದ ಕುರಿತು ಚರ್ಚೆ ನಡೆಯಲಿದೆ. ಈ ವೇಳೆ ಸಂವಿಧಾನವು ದೇಶದ ಆಶಾಕಿರಣವಾಗಿದೆ. ವಿಚಾರಗೋಷ್ಠಿ ಹಾಗೂ ಚರ್ಚೆಗಳು ಸಂಸತ್ತಿನ ಆತ್ಮವೆನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಷ್ಟ್ರಪತಿ ಹಮೀದ್ ಅನ್ಸಾರಿ ರಾಜ್ಯಸಭೆಯನ್ನುದ್ದೇಶಿಸಿ ಮಾತನಾಡಿದ್ದು, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಕೆಳಮನೆಯನ್ನುದ್ದೇಶಿಸಿ ಮಾತನಾಡಿದರು. ಲೋಕಸಭೆಯಲ್ಲಿ 26/11ರ ಮುಂಬೈ ದಾಳಿಯ ಹುತಾತ್ಮರ ಗೌರವಾರ್ಥವಾಗಿ 2 ನಿಮಿಷಗಳ ಮೌನ ಆಚರಿಸಲಾಯಿತು. ಎನ್.ಸಿ.ಪಿ.ಯ ಖೈಕಿಯೋ ಜಿಮೊಮಿ ಮರಣ ಹೊಂದಿದ್ದರಿಂದ ರಾಜ್ಯಸಭೆಯ ಅಧಿವೇಶನ ಮುಂದೂಡಲಾಗಿದೆ.
ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದ ಗೃಹ ಮಂತ್ರಿ ರಾಜ್ನಾಥ್ ಸಿಂಗ್, ಭಾರತದ ಒಗ್ಗೂಡಿಕೆಗೆ ಕಾರಣರಾದ ಸರ್ದಾರ್ ವಲ್ಲಭ್ಭಾಯ್ ಪಟೇಲರನ್ನೂ ಸ್ಮರಿಸಿದರು. ಡಾ. ಅಂಬೇಡ್ಕರ್ ಅವರು ಹಲವಾರು ಟೀಕೆಗಳನ್ನು ಎದುರಿಸಿದ್ದರೂ ಏಕೀಕೃತ ಭಾರತದ ನೋಟವನ್ನು ಹೊಂದಿದ್ದರು. ದೇಶದ ಪ್ರಥಮ ಪ್ರಧಾನಿ ಪಂ. ಜವಾಹರ್ಲಾಲ್ ನೆಹರು ಅವರು ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಹೇಳಿದ್ದಾರೆ.
ಮೀಸಲಾತಿಯನ್ನು ದುರ್ಬಲಗೊಳಿಸುವುದು ಸಾಧ್ಯವಿಲ್ಲ. ಅದು ಒಂದು ರಾಜಕೀಯ ವಿಷಯವಲ್ಲ. ಅದೊಂದು ಸಾಂವಿಧಾನಿಕ-ಆರ್ಥಿಕತೆಯ ಸಾಂವಿಧಾನಿಕ ವ್ಯವಸ್ಥೆಯಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಸ್ವಚ್ಛ ಭಾರತ ಅಭಿಯಾನ ಆರಂಭಿಸಲಾಗಿದೆ. ಸರ್ಕಾರ ಕೆಳವರ್ಗ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬದ್ಧವಾಗಿದೆ. ಪೊಲೀಸ್ ಹಾಗೂ ಅರೆ ಸೇನಾ ಪಡೆಗಳಲ್ಲಿ ಮಹಿಳೆಯರಿಗೆ ಶೇ.೨೫ ಮೀಸಲಾತಿಯೊಂದಿಗೆ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.