ಸುಬ್ರಹ್ಮಣ್ಯ : ಗುತ್ತಿಗಾರು ಕಮಿಲ ಬಳ್ಪ ರಸ್ತೆಯ ದೇವಸ್ಯದಲ್ಲಿ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ ದೊರೆತಿದೆ. ಕಳೆದ ಹಲವಾರು ವರ್ಷಗಳಿಂದ ದೇವಸ್ಯದ ಈ ಪ್ರದೇಶದಲ್ಲಿ ರಸ್ತೆ ತೀರಾ ಹದಗೆಟ್ಟಿತ್ತು.
ಗುತ್ತಿಗಾರು ಕಮಿಲ ಬಳ್ಪ ರಸ್ತೆಯ ದೇವಸ್ಯದಲ್ಲಿ ರಸ್ತೆ ಹದಗೆಟ್ಟಿತ್ತು. ಹೀಗಾಗಿ ಶಾಸಕ ಎಸ್.ಅಂಗಾರ ಹಾಗೂ ಸಾಂಸದ ನಳಿನ್ ಕುಮಾರ್ ಕಟೀಲು ಅವರ ಅನುದಾನ ಸೇರಿ ಒಟ್ಟು ಸುಮಾರು 7 ಲಕ್ಷ ರೂಪಾಯಿ ಅನುದಾನ ಲಭ್ಯವಾಗಿದ್ದು, ಇದೀಗ ಕಾಮಗಾರಿ ಆರಂಭವಾಗಿದೆ. ಈ ರಸ್ತೆ ಅನುದಾನಕ್ಕಾಗಿ ತಾಪಂ ಸದಸ್ಯ ಮುಳಿಯ ಕೇಶವ ಭಟ್ ಪ್ರಯತ್ನಿಸಿದ್ದರು. ಇದೀಗ ರಸ್ತೆಗೆ ಮುಣ್ಣು ತುಂಬಿ ಆ ಬಳಿಕ ಕಾಂಕ್ರೀಟೀಕರಣ ಮಾಡಲಾಗುತ್ತಿದೆ.
ಕಾಂಕ್ರೀಟೀಕರಣ ಕಾರ್ಯವನ್ನು ಕಮಿಲ ಬಾಂಧವ್ಯ ಗೆಳೆಯರ ಬಳಗವು ಸ್ವಾಗತಿಸಿದ್ದು ಇಲಾಖೆಗೆ ಹಾಗೂ ಜನಪ್ರತಿನಿಧಿಗಳಿಗೆ ಕೃತಜ್ಞತೆ ಹೇಳಿದೆ.
ಈ ನಡುವೆ ಕಮಿಲ ಬಳ್ಪ ರಸ್ತೆ ತೀರಾ ಹದಗೆಟ್ಟಿದ್ದು ಸಂಪೂರ್ಣ ತೇಪೆ ಕಾರ್ಯ ಮಾಡಬೇಕು ಎಂದು ಸಂಘದ ಸದಸ್ಯರು ಒತ್ತಾಯಿಸಿದ್ದಾರೆ. ಈಗಾಗಲೇ ಜಿಪಂ ಇಲಾಖೆಗೆ ಮನವಿ ಸಲ್ಲಿಸಲಾಗಿದ್ದು ಡಿಸೆಂಬರ್ 10 ರ ಒಳಗಾಗಿ ಡಾಮರೀಕರಣ ಹಾಗೂ ತೇಪೆ ಕಾರ್ಯ ಆರಂಭಿಸದೇ ಇದ್ದಲ್ಲಿ ಪ್ರತಿಭಟನೆ ನಡೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಕಳೆದ 2 ವರ್ಷಗಳಿಂದ ಮಾಡಿದ ಕಾಮಗಾರಿಯೂ ಅಸಮರ್ಪಕವಾಗಿದೆ. ಕಳೆದ ವರ್ಷ ಮಾಡಿರುವ ಡಾಮರೀಕರಣವೂ ಕಳಪೆಯಾಗಿದ್ದು ಅಲ್ಲಲ್ಲಿ ಎದ್ದು ಹೋಗಿದೆ. ಹೀಗಾಗಿ ಈ ಪ್ರದೇಶದಲ್ಲೂ ಮರುಡಾಮರೀಕರಣ ತಕ್ಷಣವೇ ಪ್ರಾರಂಭ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.