ಬೆಳ್ತಂಗಡಿ : ಲಯನ್ಸ್ ಕ್ಲಬ್, ಸೇವಾ ಸಹಕಾರಿ ಬ್ಯಾಂಕ್, ಗ್ರಾಮ ಪಂಚಾಯತ್ ಅಳದಂಗಡಿ, ಒಮೇಗಾ ಆಸ್ಪತ್ರೆ ಮಂಗಳೂರು ಮತ್ತು ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಮಂಗಳೂರು ಇವರ ಸಹಕಾರದಿಂದ ಹೃದಯ ರೋಗ ಮತ್ತು ಮಧುಮೇಹ ತಪಾಸಣಾ ಉಚಿತ ಶಿಬಿರ ಡಿ. 12 ರಂದು ಅಳದಂಗಡಿ ಸರಕಾರಿ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಸೇವಾ ಸಹಕಾರಿ ಬ್ಯಾಂಕ್ ಅಳದಂಗಡಿ ಇದರ ಅಧ್ಯಕ್ಷ ಸುಭಾಶ್ಚಂದ್ರ ರೈ ತಿಳಿಸಿದರು.
ಅವರು ಸೋಮವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಶಿಬಿರದ ವಿವರ ನೀಡಿದರು. ಶಿಬಿರವು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಶಿಬಿರವನ್ನು ಶಾಸಕ ಕೆ. ವಸಂತ ಬಂಗೇರ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ಡಾ| ಪದ್ಮಪ್ರಸಾದ್ ಅಜಿಲ ವಹಿಸಲಿದ್ದಾರೆ. ಹೃದ್ರೋಗ ತಜ್ಞ ಡಾ| ಮುಕುಂದ್ ಕೆ., ಗ್ರಾ.ಪಂ.ಅಧ್ಯಕ್ಷ ಸತೀಶ್ ಮಿತ್ತಮಾರು, ಲಯನ್ಸ್ ಅಧ್ಯಕ್ಷ ಎಲೋಸಿಯಸ್ ಡಿಸೋಜ, ಕಾರ್ಯದರ್ಶಿ ಹಿಲರಿ ಫೆರ್ನಾಂಡಿಸ್, ಖಜಾಂಜಿ ಧರ್ಣಪ್ಪ ಪೂಜಾರಿ, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀರಾ ಅತಿಥಿಗಳಾಗಿರುತ್ತಾರೆ ಎಂದರು.
ಶಿಬಿರಾರ್ಥಿಗಳಿಗೆ ಇಸಿಜಿ, ರಕ್ತದೊತ್ತಡ, ಮಧುಮೇಹ, ಹೃದಯ ಸ್ಕ್ಯಾನಿಂಗ್, ಹೃದಯ ತಜ್ಞರಿಂದ ಉಚಿತ ಪರೀಕ್ಷೆ ಹಾಗೂ ಆಹಾರ ಪದ್ಧತಿಗಳ ಸಲಹೆಯನ್ನೂ ನೀಡಲಿದ್ದಾರೆ. ಶಿಬಿರಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ರಿಯಾಯತಿ ದರದಲ್ಲಿ ಅಂಜಿಯೋಗ್ರಾಂ, ಅಂಜಿಯೋಪ್ಲಾಸ್ಟ್ ಹಾಗೂ ತೆರೆದ ಹೃದಯದ ಶಸ್ತ್ರ ಚಿಕಿತ್ಸೆ ಹಾಗೂ ಇನ್ನಿತರ ಸಂಬಂಧಿ ಚಿಕಿತ್ಸೆಯನ್ನು ಒಮೆಗಾ ಆಸ್ಪತ್ರೆಯಲ್ಲಿ ನಡೆಸಿಕೊಡಲಾಗುವುದು. ಜೊತೆಗೆ ಹೃದಯದ ಕೊರೊನರಿ ಕ್ಯಾಲ್ಸಿಯಂ ಸ್ಕೋರಿಂಗ್ ಕೇವಲ ರೂ. ನಾಲ್ಕುಸಾವಿರಕ್ಕೆ ನಡೆಸಿಕೊಡಲಾಗುವುದು ಎಂದರು. ಶಿಬಿರಕ್ಕೆ ಬರುವ ಶಿಬಿರಾರ್ಥಿಗಳು ತಮ್ಮ ಹಳೆಯ ವೈದ್ಯಕೀಯ ದಾಖಲೆಗಳನ್ನು ತರಬೇಕು ಎಂದರು. ಹೆಸರನ್ನು ನೋಂದಾಯಿಸಿಕೊಳ್ಳಲು9449269631 / 9480227656 / 9880924411 / 9008124597 ನ್ನು ಸಂಪರ್ಕಿಸಬಹುದಾಗಿದೆ ಎಂದರು.
ಗೋಷ್ಠಿಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಎಲೋಸಿಯಸ್ ಡಿಸೋಜ, ತಾ.ಪಂ. ಸದಸ್ಯ ದರ್ಣಪ್ಪ ಪೂಜಾರಿ, ಪಂ. ಅಧ್ಯಕ್ಷ ಸತೀಶ್ ಮಿತ್ತಮಾರು, ಒಮೆಗಾ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀನಾಥ್ ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.