ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ತ್ರೀ ಶಕ್ತಿ ಸಹಕಾರಿ ಸಂಘಗಳ ಹಾಗೂ ಮಹಿಳಾ ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕಾರ್ಯದಕ್ಷತೆ ತರಬೇತಿ ಶಿಬಿರವು ಬಾಲ ಭವನ, ಕದ್ರಿ, ಮಂಗಳೂರು ಇದರ ಸಭಾಂಗಣದಲ್ಲಿ ನಡೆಯಿತು.ಕಾರ್ಯ ದಕ್ಷತೆ ತರಬೇತಿ ಶಿಬಿರದ ಉದ್ಘಾಟನೆಯನ್ನು ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಬಿ. ಕೆ. ಸಲೀಂ ರವರು ನೆರವೇರಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಮೀನಾಕ್ಷಿ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ರೀ ಸುಂದರ ಪೂಜಾರಿ, ನಿರೂಪಣಾಧಿಕಾರಿ ಶ್ರೀ ನಟರಾಜ್ ರವರು ಉಪಸ್ಥಿತರಿದ್ದರು. ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್ ರವರು ತರಬೇತಿ ಶಿಬಿರದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸಹಕಾರ ಇಲಾಖೆಯ ಶ್ರೀ ಎನ್. ಜೆ. ಗೋಪಾಲ್ ರವರು ಉಪನ್ಯಾಸ ನೀಡಿದರು.
ದ. ಕ. ಜಿಲ್ಲಾ ಸಹಕಾರಿ ಯೂನಿಯನ್ನ ನಿರ್ದೇಶಕರಾದ ಶ್ರೀ ನೀಲಯ ಎಂ. ಅಗರಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಾವಿತ್ರಿ ರೈ ಕೆ., ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ತ್ರೀ ಶಕ್ತಿ ಸಹಕಾರಿ ಸಂಘಗಳ ಹಾಗೂ ಮಹಿಳಾ ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಒಟ್ಟು ೮೦ ಮಂದಿ ಈ ಶಿಬಿರದಲ್ಲಿ ಹಾಜರಿದ್ದರು.ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಮಂಗಳೂರು, ಸಹಕಾರ ಇಲಾಖೆ, ದ. ಕ. ಜಿಲ್ಲೆ ಇವರು ತರಬೇತಿ ಶಿಬಿರವನ್ನು ಆಯೋಜಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.