ಮಂಗಳೂರು: ಡಿಸೆಂಬರ್ 5ರ ಮಧ್ಯರಾತ್ರಿ 12 ರಿಂದ ಡಿಸೆಂಬರ್ 6ರ ಮಧ್ಯರಾತ್ರಿ 12ರವರೆಗೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯಾವುದೇ ಸಾರ್ವಜನಿಕ, ರಾಜಕೀಯ, ಧಾರ್ಮಿಕ ಸಭೆ ಸಮಾರಂಭಗಳನ್ನು, ಮೆರವಣಿಗೆಗಳನ್ನು, ಜಾಥಾ, ಧರಣಿ, ಪ್ರತಿಭಟನೆ, ರಸ್ತೆ ತಡೆ ನಡೆಸುವುದನ್ನು ಮತ್ತು ಪೋಸ್ಟರ್ಗಳನ್ನು ಅಂಟಿಸುವುದನ್ನು, ಗುಂಪು ಸೇರುವುದನ್ನು, ಮುತ್ತಿಗೆ ಹಾಕುವುದನ್ನು ನಿಷೇಧಿಸಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆ 1963, ಸೆಕ್ಷನ್ 36ರ ಅನ್ವಯ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಈ ಘೋಷಣೆಯನ್ನು ಮಾಡಿದ್ದಾರೆ. ಡಿ. 6 ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದ ದಿನವಾಗಿದ್ದು, ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇರಬಹುದು ಎಂಬ ಹಿನ್ನಲೆಯಲ್ಲಿ ನಿಷೇಧಗಳನ್ನು ಹೇರಲಾಗಿದೆ.
ಮಂಗಳೂರಿನಲ್ಲಿ ಇತ್ತೀಚಿಗೆ ಹಲವಾರು ಅಹಿತಕರ ಘಟನೆಗಳು ಸಂಭವಿಸಿದ್ದು, ಸಾರ್ವಜನಿಕರಲ್ಲಿ ಆತಂಕವನ್ನು ಮೂಡಿಸಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಯವರು ಡಿ.6ರಂದು ಕೆಲವೊಂದು ನಿರ್ಬಂಧಗಳನ್ನು ಹೇರಿದ್ದಾರೆ.
ನಿರ್ಬಂಧವನ್ನು ಮೀರಿ ಯಾರಾದರೂ ಬಂದ್ ಅಥವಾ ಪ್ರತಿಭಟನೆಗೆ ಮುಂದಾದರೆ ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.