ನವದೆಹಲಿ: ಕೇಂದ್ರವನ್ನು ಸಂಪರ್ಕಿಸದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹಂತಕರನ್ನು ಜೈಲಿನಿಂದ ಬಿಡುಗಡೆ ಮಾಡುವ ಅಧಿಕಾರ ತಮಿಳುನಾಡು ಸರ್ಕಾರಕ್ಕಿಲ್ಲ ಎಂದು ಬುಧವಾರ ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿದೆ, ಹೀಗಾಗಿ ತಮಿಳುನಾಡು ಸರ್ಕಾರಕ್ಕೆ ಅಪರಾಧಿಗಳನ್ನು ತನ್ನಿಷ್ಟಕ್ಕೆ ತಕ್ಕಂತೆ ಬಿಡುಗಡೆ ಮಾಡುವ ಅಧಿಕಾರವಿಲ್ಲ. ಒಂದು ವೇಳೆ ತನಿಖೆಯನ್ನು ರಾಜ್ಯ ಸರ್ಕಾರ ನಡೆಸಿದ್ದ ಸಂದರ್ಭದಲ್ಲಿ ಬಿಡುಗಡೆಗೊಳಿಸುವ ಅಧಿಕಾರವಿತ್ತು ಎಂದು ಸಾಂವಿಧಾನಿಕ ನ್ಯಾಯಪೀಠ ಹೇಳಿದೆ.
ರಾಜೀವ್ ಅವರನ್ನು ಹತ್ಯೆಗೈದ 7 ಮಂದಿಯನ್ನು ಬಿಡುಗಡೆ ಮಾಡುವುದಾಗಿ ಇತ್ತೀಚಿಗೆ ತಮಿಳುನಾಡು ಸರ್ಕಾರ ಘೋಷಿಸಿತ್ತು, ಇದನ್ನು ವಿರೋಧಿಸಿ ಕೇಂದ್ರ ಸುಪ್ರೀಂ ಮೊರೆ ಹೋಗಿತ್ತು. ಈ ಏಳು ಮಂದಿ 20 ವರ್ಷಗಳಿಂದ ಸೆರೆವಾಸ ಅನುಭವಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.