ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಡಿ. 6 ರಂದು ಉಜಿರೆಯಿಂದ ಧರ್ಮಸ್ಥಳದ ತನಕ ನಡೆಯುವ 3 ನೇ ವರ್ಷದ ಸಕಲ ಸಿದ್ಧತೆಗಳು ಸಮಿತಿ ವತಿಯಿಂದ ನಡೆದಿದ್ದು ಕ್ಷಣಗಣನೆ ಆರಂಭವಾಗಿದೆ.
ಭಾನುವಾರ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಳದ ವಠಾರದಿಂದ ಮಧ್ಯಾಹ್ನ 3 ಗಂಟೆಗೆ ಪಾದಯಾತ್ರೆ ಭಜನೆಯೊಂದಿಗೆ ಆರಂಭವಾಗಲಿದೆ. ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ಈ ಸಾಮೂಹಿಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆಯು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿದ ಬಳಿಕ ಮುಕ್ತಾಯಗೊಳ್ಳಲಿದೆ. ಈ ಸಂದರ್ಭ ಸಮಗ್ರ ಸಮಾಜದಲ್ಲಿ ಶಾಂತಿ, ನೆಮ್ಮದಿಯ ವಾತಾವರಣ ನೆಲೆಗೊಳ್ಳಲಿ ಎಂದು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಗುವುದು.
ಬಳಿಕ ಅಮೃತ ವರ್ಷಿಣಿ ಸಭಾಂಗಣದಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಪಾದಯಾತ್ರಿಕರನ್ನು ಉದ್ದೇಶಿಸಿ ಮಾರ್ಗದರ್ಶನ ಮಾಡಲಿದ್ದಾರೆ. ಈಗಾಗಲೇ ತಾಲೂಕಿನಲ್ಲಿ 10 ವಲಯ ಮತ್ತು ಗ್ರಾಮ ಮಟ್ಟದಲ್ಲಿ ಪಾದಯಾತ್ರೆಯ ಸಮಿತಿ ವತಿಯಿಂದ ಸಭೆಗಳು ನಡೆದಿವೆ. ಪಾದಯಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಯಾತ್ರೆಯನ್ನು ಶಾಂತಿಯುತವಾಗಿ ಯಶಸ್ವಿಗೊಳಿಸಲಿದ್ದಾರೆ. ಪಾದಯಾತ್ರೆಯ ಬಳಿಕ ಧರ್ಮಸ್ಥಳದಿಂದ ದಿಡುಪೆ, ನೆರಿಯ, ಗುರುವಾಯನಕರೆ ಪ್ರದೇಶಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಪಾದಯಾತ್ರೆ ಸಮಿತಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.