ನವದೆಹಲಿ: ನ್ಯಾ.ತೀರತ್ ಸಿಂಗ್ ಥಾಕೂರ್ ಅವರು ಗುರುವಾರ ದೇಶದ 43ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು 63 ವರ್ಷದ ತೀರತ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಮುಖ್ಯನ್ಯಾಯಮೂರ್ತಿ ಎಚ್ಎಲ್ ದತ್ತು ಅವರು ನಿವೃತ್ತರಾಗಿದ್ದಾರೆ.
ಸುಪ್ರೀಂಕೋರ್ಟ್ ಜಡ್ಜ್ ಆಗಿದ್ದ ತೀರತ್ ಅವರು ಐಪಿಎಲ್ನ ಬೆಟ್ಟಿಂಗ್, ಸ್ಪಾಟ್ ಫಿಕ್ಸಿಂಗ್ ಪ್ರಕರಣ, ಶಾರದ ಚಿಟ್ ಫಂಡ್ ಪ್ರಕರಣ ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳ ಬಗ್ಗೆ ನ್ಯಾಯದಾನ ಮಾಡಿದ್ದ ನ್ಯಾಯಪೀಠಗಳ ಮುಖ್ಯಸ್ಥರಾಗಿದ್ದರು.
ಜನವರಿ 4, 1952ರಲ್ಲಿ ಜನಿಸಿದ ಇವರು, ಕೇವಲ ಒಂದು ವರ್ಷಗಳ ಕಾಲವಷ್ಟೇ ಮುಖ್ಯ ನ್ಯಾಯಮೂರ್ತಿ ಸ್ಥಾನದಲ್ಲಿದ್ದು, 2017ರ ಜನವರಿ 4ರಂದು ನಿವೃತ್ತರಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.