ಬೆಳ್ತಂಗಡಿ : ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಹಿರಿಯ ಪ್ರಾಥಮಿಕ ವಿಭಾಗದ ಬಾಲಕಿಯರ ತಂಡವು ಬೆಂಗಳೂರು ಹಾಗೂ ಕಲಬುರ್ಗಿ ವಿಭಾಗವನ್ನು ಪರಾಭವಗೊಳಿಸಿ ದ್ವಿತೀಯ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.
ಆಂಧ್ರ ಪ್ರದೇಶದ ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರು: ಹರಿಣಾಕ್ಷಿ, ತನುಶ್ರೀ,ಪ್ರಶಾಂತಿ, ತುಳಸಿ, ಸಂಗೀತ ಚೈತನ್ಯ. ಸತತ ೩ನೇ ಭಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಬಾಲಕಿಯರ ವಾಲಿಬಾಲ್ ತಂಡಕ್ಕೆ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ತರಬೇತಿ ನೀಡಿರುತ್ತಾರೆ.
ಶಿಕ್ಷಕಿ ಲಲಿತಾ ತಂಡದ ವ್ಯವಸ್ಥಾಪಕರಾಗಿ ಸಹಕರಿಸಿದ್ದಾರೆ. ಎಸ್ಡಿಎಂಸಿ ಅಧ್ಯಕ್ಷೆ ಶ್ರೀಲತಾ, ಮಾಜಿ ಅಧ್ಯಕ್ಷ ಉದಯ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಾ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.